BSY ಆಡಿಯೋ ಸ್ಫೋಟ: ನಳಿನ್ ಕುಮಾರ್ ಕಟೀಲ್ ಆಪ್ತನ ಬೆಂಬಲಿಗರ ಮೇಲೆ ಅನುಮಾನ

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅನರ್ಹ ಶಾಸಕರ ಪರವಾಗಿ ಮಾತನಾಡಿರುವ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಪ್ತನ ಬೆಂಬಲಿಗರ ಮೇಲೆ ಅನುಮಾನಗಳು ವ್ಯಕ್ತವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು/ಹುಬ್ಬಳ್ಳಿ,(ನ.05): ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅನರ್ಹ ಶಾಸಕರ ಪರವಾಗಿ ಮಾತನಾಡಿರುವ ಆಡಿಯೋ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆಪ್ತನ ಬೆಂಬಲಿಗರ ಮೇಲೆ ಅನುಮಾನಗಳು ವ್ಯಕ್ತವಾಗಿದೆ.

ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದಿದ್ದ ಕೋರ್ ಕಮಿಟಿ ಸಭೆಯಲ್ಲಿ ಬಿಎಸ್‌ವೈ ಮಾತನಾಡಿದ್ದ ಆಡಿಯೋವನ್ನು ಇತ್ತೀಚೆಗೆ ನೇಮಕೊಂಡಿದ್ದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯ ಬೆಂಬಲಿಗರು ಲೀಕ್ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ಇತ್ತೀಚೆಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯನ್ನು ಸ್ವತಃ ನಳಿನ್ ಕುಮಾರ್ ಕಟೀಲ್ ನೇಮಕ ಮಾಡಿದ್ದರು. ಇದೀಗ ಅವರ ಬೆಂಬಲಿಗರೇ ಆಡಿಯೋವನ್ನು ಬಹಿರಂಗೊಳಿಸಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ. ಹಾಗಾದ್ರೆ ಯಾರು ಆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

ನವೆಂಬರ್ 5ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Related Video