ಕೆ.ಆರ್. ಪೇಟೆಯಲ್ಲಿ ಸುಮಲತಾ ಬೆಂಬಲ ಯಾರಿಗೆ? ಕೊನೆಗೂ ಬಂತು ಸುಳಿವು ಹೊರಗೆ
ರಾಜ್ಯದ ಏಕೈಕ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ದ್ವಂದ್ವದಲ್ಲಿದ್ದಾರೆ. ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ಯಾರಿಗೆ ಬೆಂಬಲ ಕೊಡ್ಬೇಕು ಎಂಬವುದರ ಬಗ್ಗೆ ಸುಮಲತಾ ಮೌನವಹಿಸಿದ್ದಾರೆ. ಈ ಬಗ್ಗೆ ಅಧಿಕೃತ ನಿರ್ಧಾರ ಇನ್ನೂ ಬಹಿರಂಗಪಡಿಸಿಲ್ಲ, ಆದರೆ ಅದರ ಬಗ್ಗೆ ಸುಳಿವು ಸಿಕ್ಕಿದೆ.
ಬೆಂಗಳೂರು (ನ.20): ರಾಜ್ಯದ ಏಕೈಕ ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ದ್ವಂದ್ವದಲ್ಲಿದ್ದಾರೆ. ಕೆ. ಆರ್. ಪೇಟೆ ಉಪಚುನಾವಣೆಯಲ್ಲಿ ಯಾರಿಗೆ ಬೆಂಬಲ ಕೊಡ್ಬೇಕು ಎಂಬವುದರ ಬಗ್ಗೆ ಸುಮಲತಾ ಮೌನವಹಿಸಿದ್ದಾರೆ. ಈ ಬಗ್ಗೆ ಅಧಿಕೃತ ನಿರ್ಧಾರ ಇನ್ನೂ ಬಹಿರಂಗಪಡಿಸಿಲ್ಲ, ಆದರೆ ಅದರ ಬಗ್ಗೆ ಸುಳಿವು ಸಿಕ್ಕಿದೆ.
ಮಂಡ್ಯದ ಕೆ.ಆರ್. ಪೇಟೆಯಿಂದ ಕಳೆದ ಬಾರಿ ಜೆಡಿಎಸ್‌ನಿಂದ ಗೆದ್ದಿದ್ದ ಕೆ.ಸಿ. ನಾರಯಣ ಗೌಡ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಕಾಂಗ್ರೆಸ್‌ನಿಂದ ಬಿ.ಚಂದ್ರಶೇಖರ್ ಮತ್ತು ಜೆಡಿಎಸ್‌ನಿಂದ ಬಿ.ಎಲ್. ದೇವರಾಜು ಕಣದಲ್ಲಿದ್ದಾರೆ.
ಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನವಾಗಿತ್ತು. ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.