ವಿಜಯೇಂದ್ರಗೆ ಶಿಕಾರಿಪುರ: ಯಡಿಯೂರಪ್ಪ ಕ್ಷೇತ್ರತ್ಯಾಗದ ಗುಟ್ಟೇನು..?
ನಾಲ್ಕು ದಶಕಗಳ ಸುದೀರ್ಘ ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಬಿಎಸ್‌ವೈ ನಿವೃತ್ತಿ ಘೋಷಿಸಿದ್ದಾರೆ. ತಾವು ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ತಮ್ಮ ಕಿರಿಯ ಪುತ್ರ ವಿಜಯೇಂದ್ರ ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ.
ನಾಲ್ಕು ದಶಕಗಳ ಸುದೀರ್ಘ ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಬಿಎಸ್‌ವೈ (BS Yediyurappa) ನಿವೃತ್ತಿ ಘೋಷಿಸಿದ್ದಾರೆ. ತಾವು ಸ್ಪರ್ಧೆ ಮಾಡುತ್ತಿದ್ದ ಶಿಕಾರಿಪುರ (Shikaripura) ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿರುವ ತಮ್ಮ ಕಿರಿಯ ಪುತ್ರ ವಿಜಯೇಂದ್ರ (Vijayendra) ಅವರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದಾರೆ. ಈ ಮೂಲಕ ತಾವು ಸ್ಪರ್ಧಿಸುತ್ತಿದ್ದ ಕ್ಷೇತ್ರದಿಂದಲೇ ಕಿರಿಯ ಪುತ್ರನನ್ನೂ ಚುನಾವಣಾ ರಾಜಕೀಯಕ್ಕಿಳಿಸುವ ಸಂಕಲ್ಪ ಮಾಡಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಗೊಂಡರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ವಿರೋಧ ಪಕ್ಷಗಳಿಗೂ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ನನಗೂ ಸಿಎಂ ಆಗೋ ಕನಸಿದೆ.... 1 ಕನಸು.... 4 ಕಣ್ಣು... ಏನಿದು ಕಾಂಗ್ರೆಸ್ ಕಥೆ..?
ನಾನು ನನ್ನ ಕ್ಷೇತ್ರವನ್ನು ಬಿಟ್ಟು ಕೊಡುತ್ತಿರುವ ಕಾರಣ ಮುಂದಿನ ಚುನಾವಣೆಯಲ್ಲಿ ನನ್ನ ಮಗ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ನನಗೆ ಹೇಗೆ ಬೆಂಬಲ ನೀಡಿದಿರೋ ಅದೇ ರೀತಿ ವಿಜಯೇಂದ್ರ ಅವರಿಗೂ ನೀಡಿ ಎಂದು ಶಿಕಾರಿಪುರ ಜನತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಕ್ಷೇತ್ರ ತ್ಯಾಗದ ಹಿಂದಿನ ಲೆಕ್ಕಾಚಾರವೇನು..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್.