Asianet Suvarna News Asianet Suvarna News

ರಾಜ್ಯದ ನಾಯಕತ್ವ ಗಟ್ಟಿಯಾಗಿ ಇದ್ದಾಗ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ: ಬಿ.ಎಸ್.ಯಡಿಯೂರಪ್ಪ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಿಂತು ಹೋಗಿದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗವನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 

ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಈ ದೇಶವನ್ನು ಆಳುವ ನಾಯಕತ್ವ ಇಲ್ಲ. ಕರ್ನಾಟಕದಲ್ಲಿ ನಾವು 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಅಧಿವೇಶನ ಮುಗಿದ ಮೇಲೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ಎಲ್ಲಾ ಕಡೆ ಉತ್ತಮ ಸ್ಪಂದನೆ ಸಿಕ್ಕಿದೆ. ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗವನ್ನು ನಮ್ಮ ಜೊತೆ ತೆಗೆದುಕೊಂಡು ಹೋಗುತ್ತೇವೆ. ಈ ಫಲಿತಾಂಶ ರಾಜ್ಯದಲ್ಲಿ ಕಾಂಗ್ರೆಸ್‌ ಧೂಳಿಪಟ ಮಾಡಲು ಸಹಕಾರಿಯಾಗಿದೆ. ಬಿಜೆಪಿ ರಾಜ್ಯದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಕಾಂಗ್ರೆಸ್‌ ಸರ್ಕಾರದ ವೈಫಲ್ಯವನ್ನು ಮುಂದಿನ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ ಎಂದು ಬಿಎಸ್‌ ಯಡಿಯೂರಪ್ಪ ಹೇಳಿದ್ದಾರೆ.  

ಇದನ್ನೂ ವೀಕ್ಷಿಸಿ:  ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡಿರುವುದೇ ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲ್ಲಲು ಕಾರಣ: ಡಿ.ವಿ. ಸದಾನಂದ ಗೌಡ

Video Top Stories