ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : BJP ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

  • ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಇಲ್ಲ
  • ಮುಖ್ಯಮಂತ್ರಿ ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಬದಲಾವಣೆ ಇಲ್ಲ
  • ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ
First Published Jun 10, 2021, 1:31 PM IST | Last Updated Jun 10, 2021, 1:31 PM IST

 ನವದೆಹಲಿ (ಜೂ.10): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅವರನ್ನು ಬದಲಾಯಿಸುವುದಿಲ್ಲವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆ: ಬಿಜೆಪಿ ಶಾಸಕರುಗಳಿಗೆ ಸ್ಪಷ್ಟ ಸಂದೇಶ ಕೊಟ್ಟ ಸಿಎಂ ...

ದೆಹಲಿಯಲ್ಲಿಂದು ಮಾತನಾಡಿದ ಅರುಣ್ ಸಿಂಗ್ ನಾನು ಮೂರು ದಿನ ಕರ್ನಾಟಕ ಪ್ರವಾಸ ಮಾಡುತ್ತೇನೆ. ಜೂನ್ 17 ಅಥವಾ 18 ರಿಂದ ಮೂರು ದಿನ ಪ್ರವಾಸ ನಡೆಯಲಿದೆ.  ಸಿಎಂ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ.  ಈ ವೇಳೆ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡುತ್ತೆನೆ.  ಬಿಜೆಪಿ ಪಕ್ಷದ ಅಧ್ಯಕ್ಷರ ಅಥವಾ ಸಿಎಂ ಬದಲಾವಣೆಯ ವಿಚಾರ ಹೈಕಮಾಂಡ್ ಮುಂದೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.