ನಾಯಕತ್ವ ಬದಲಾವಣೆ: ಯಡಿಯೂರಪ್ಪನವರನ್ನ ಬಚಾವ್ ಮಾಡುತ್ತಾ ಪ್ರವಾಹ?
ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು, (ಜು.25): ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್ ಆದ್ರಾ ಸಿಎಂ?
ರಾತ್ರಿಯ ವೇಳೆ ಹೈಕಮಾಂಡ್ನಿಂದ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಂದೇಶ ಬರಲಿದ್ದು ರಾಜೀನಾಮೆ ವಿಚಾರವನ್ನು ಅವರಿಗೆ ಸ್ಪಷ್ಟವಾಗಿ ತಿಳಿಸಲಿದ್ದಾರೆ ಎನ್ನಲಾಗಿದೆ.