Asianet Suvarna News

ನಾಯಕತ್ವ ಬದಲಾವಣೆ: ದಿಲ್ಲಿಯಿಂದಲೇ ಬಂತು ಸ್ಪಷ್ಟ ಸಂದೇಶ

Jun 13, 2021, 7:20 PM IST

ಬೆಂಗಳೂರು, (ಜೂನ್.13): ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಬಗ್ಗೆ ಕರ್ನಾಟಕ ಬಿಜೆಪಿಯಲ್ಲಿ ಚರ್ಚೆಗಳ ಸಹ ಜೋರಾಗಿವೆ. ಇದರಿಂದ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಬರುತ್ತಿದ್ದಾರೆ. 

ನಾಯಕತ್ವ ಬದಲಾವಣೆ ಕೂಗಿನ ಬೆನ್ನಲ್ಲೇ ಹೈಕಮಾಂಡ್ ಮಾಸ್ಟರ್ ಪ್ಲಾನ್

ಮೂರು ದಿನ ಕರ್ನಾಟಕ ಪ್ರವಾಸದಲ್ಲಿರುವ ಅರುಣ್ ಸಿಂಗ್, ನಾಯಕತ್ವ ಬದಲಾವಣೆ ವಿಚಾರವಾಗಿ ಸಚಿವರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಅದಕ್ಕೂ ಮೊದಲು ಅರುಣ್ ಸಿಂಗ್ ಬಿಎಸ್‌ವೈ ಪರ  ಬ್ಯಾಟಿಂಗ್ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.