ಡಿಕೆಶಿಗೆ 'ಮೆಡಿಕಲ್' ಶಾಕ್: ಕಾಲೇಜು ಯುದ್ಧದಲ್ಲಿ ಗೆದ್ದ ಸುಧಾಕರ್..!
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ರಾಜಕೀಯ ಪ್ರತಿಷ್ಠೆಗೆ ಕಾರಣವಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ.
ಬೆಂಗಳೂರು, (ಅ.31): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ಅನರ್ಹ ಶಾಸಕ ಡಾ.ಕೆ. ಸುಧಾಕರ್ ನಡುವಿನ ರಾಜಕೀಯ ಪ್ರತಿಷ್ಠೆಯಾಗಿದ್ದ ಮೆಡಿಕಲ್ ಕಾಲೇಜಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಇತಿಶ್ರೀ ಹಾಡಿದೆ.
ಮೆಡಿಕಲ್ ಕಾಲೇಜು ಕಿಚ್ಚು: ಡಿಕೆಶಿ-ಸುಧಾಕರ್ ಮಧ್ಯೆ ಕಿಡಿ ಇಟ್ಟ ಯಡಿಯೂರಪ್ಪ..!
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ಈಗ ದೊಡ್ಡಬಳ್ಳಾಪುರದ ಪಾಲಾಗಿದೆ. ಅನರ್ಹ ಶಾಸಕ ಡಾ. ಸುಧಾಕರ್ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಮೆಡಿಕಲ್ ಕಾಲೇಜನ್ನು ದೊಡ್ಡಬಳ್ಳಾಪುರಕ್ಕೆ ಶಿಫ್ಟ್ ಮಾಡಿದೆ.
ಇಂದು [ಗುರುವಾರ] ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಷ್ಟೇ ಅಲ್ಲದೇ ಮೊದಲ ಹಂತದ ಹಣ ಬಿಡುಗಡೆ ಮಾಡಲು ಸಹ ಇಂದಿನ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಇನ್ನುಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ..