ನಾಯಕತ್ವ ಬದಲಾವಣೆ: ಯಡಿಯೂರಪ್ಪಗೆ ಪರೋಕ್ಷ ಟಾಂಗ್ ಕೊಟ್ಟ ಸಿಟಿ ರವಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಗೋವಾದಲ್ಲಿ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು, (ಜು.25): ಕರ್ನಾಟಕ ರಾಜಕೀಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಇಂದು (ಭಾನುವಾರ) ರಾತ್ರಿಯ ಒಳಗೆ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದ್ದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕೋ? ಬೇಡವೋ? ಎನ್ನುವ ವಿಚಾರವಾಗಿ ಹೈಕಮಾಂಡ್ ನಾಯಕರು ಸೂಚನೆ ನೀಡಲು ಸಿದ್ಧರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಯಕತ್ವ ಬದಲಾವಣೆ ವಿಚಾರ ರೋಚಕ ತಿರುವು: ಸೇಫ್ ಆದ್ರಾ ಸಿಎಂ?
ಇನ್ನು ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಗೋವಾದಲ್ಲಿ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.