Asianet Suvarna News Asianet Suvarna News

ನಾಯಕತ್ವ ಬದಲಾವಣೆ ನಿಶ್ಚಿತವಾ? ಬಿಜೆಪಿ ಅಧ್ಯಕ್ಷರದ್ದು ಎನ್ನಲಾದ ಆಡಿಯೋನಲ್ಲಿ ಬಹಿರಂಗ

Jul 18, 2021, 11:21 PM IST

ಬೆಂಗಳೂರು, (ಜು.18): ಬಿಎಸ್‌ ಯಡಿಯೂರಪ್ಪ ಅವರು ದೆಹಲಿಯಲ್ಲಿ ಕೇಂದ್ರ ನಾಯಕರನ್ನ ಭೇಟಿ ಮಾಡಿ ನಗುತ್ತಲೇ ರಾಜ್ಯಕ್ಕೆ ಆಗಮಿಸಿದ್ದಾರೆ. ಅಲ್ಲದೇ ನಾಯಕತ್ವ ಬದಲಾವಣೆ ಇಲ್ಲ. ಈ ಬಗ್ಗೆ ಹೈಕಮಾಂಡ್ ಏನು ಹೇಳಿಲ್ಲ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮಾಧ್ಯಮಗಳ ಮೂಲಕ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಿದ್ರು.

ದೆಹಲಿಯಿಂದ ವಾಪಸ್ಸಾದ ಬಳಿಕ ರಾಜಕೀಯ ಚಟುವಟಿಕೆ ಬಿರುಸು; ಜು. 26 ಕ್ಕೆ ಶಾಸಕಾಂಗ ಸಭೆ

ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಲೀಕ್ ಆಗಿದ್ದು, ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ನಾಯಕತ್ವ ಬದಲಾವಣೆ ಹಾಗೂ ಕೆಲ ಸಚಿವರನ್ನ ಸಂಪುಟದಿಂದ ಕೈಬಿಡುವುದು ನಿಶ್ಚಿತ ಎಂದು ಆಡಿಯೋನಲ್ಲಿದೆ. ಹಾಗಾದ್ರೆ ಬಿಎಸ್‌ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ನಿಶ್ಚಿತವಾ? ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.