ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?
PSI ಹುದ್ದೆಗಳ ನೇಮಕಾತಿ ಅಕ್ರಮದ ವಹಿವಾಟು ಸಿಐಡಿ ಬಗೆದಷ್ಟೂ ಒಂದೊಂದೆ ಭ್ರಷ್ಟಾಚಾರದ ಮುಖವಾಡ ಬೆಳಕಿಗೆ ಬರುತ್ತಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿಯನ್ನು ಬಂಧಿಸಲಾಗಿದೆ. ಸೇವೆಯಿಂದ ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರಮುಖರ ಕೈಗಳಿವೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ.
ಬೆಂಗಳೂರು, (ಜುಲೈ 05): PSI ಹುದ್ದೆಗಳ ನೇಮಕಾತಿ ಅಕ್ರಮದ ವಹಿವಾಟು ಸಿಐಡಿ ಬಗೆದಷ್ಟೂ ಒಂದೊಂದೆ ಭ್ರಷ್ಟಾಚಾರದ ಮುಖವಾಡ ಬೆಳಕಿಗೆ ಬರುತ್ತಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿಯನ್ನು ಬಂಧಿಸಲಾಗಿದೆ. ಸೇವೆಯಿಂದ ಅಮಾನತು ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ ಪ್ರಮುಖರ ಕೈಗಳಿವೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಹೇಳುತ್ತಿದೆ.
PSI Recruitment Scam: ಅಮೃತ್ ಪೌಲ್ ಆಯ್ತು, ನೆಕ್ಸ್ಟ್ ಯಾರು?
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನ ಸಿಐಡಿ ಬಂಧಿಸಿದ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿದೆ.