ರಾಜಾಹುಲಿ ಪರ ಘರ್ಜಿಸಿದ ಮರಿಹುಲಿ: ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ ವಿಜಯೇಂದ್ರ!

ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತಂದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದಷ್ಟೇ ಅವರ ಉದ್ದೇಶ. ಅವರನ್ನು ಬಿಟ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ?’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ.

Share this Video
  • FB
  • Linkdin
  • Whatsapp

ಇಂದು ಕೆಲವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಯಡಿಯೂರಪ್ಪ ಅವರಿಗೆ ನಾಳೆ ಸಿಎಂ ಆಗಬೇಕೆಂಬ ಕನಸಿಲ್ಲ. ಮಕ್ಕಳನ್ನು ಎಂಎಲ್‌ಎ ಮಾಡಿ ಮಂತ್ರಿಯಾಗಿಸುವ ಗುರಿಯೂ ಇಲ್ಲ. ಮತ್ತೊಮ್ಮೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತಂದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದಷ್ಟೇ ಅವರ ಉದ್ದೇಶ. ಅವರನ್ನು ಬಿಟ್ಟು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಎದೆಗಾರಿಕೆ ಯಾರಿಗಾದರೂ ಇದೆಯಾ?’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದ್ದಾರೆ. ಈ ಮೂಲಕ ತಂದೆಯ ವಿರೋಧಿಗಳಿಗೆ ವಿಜಯೇಂದ್ರ ಖಡಕ್‌ ಎಚ್ಚರಿಕೆ ಕೊಟ್ಟಿದ್ದಾರೆ. ಸೋಮಣ್ಣ ಹಾಗೂ ಪುತ್ರನಿಗೆ ಬಿಸಿ ಮುಟ್ಟಿಸಿದ್ದಾರೆ ಎಂದೂ ಹೇಳಲಾಗ್ತಿದೆ.

Related Video