Asianet Suvarna News Asianet Suvarna News

ಸಂಪುಟ ಸಭೆಯಲ್ಲಿ ಮೀಸಲಾತಿ ಮಾತು, ಗೊಂದಲಕಾರಿ ಹೇಳಿಕೆ ನೀಡದಂತೆ ಸಚಿವರಿಗೆ ತಾಕೀತು

ವೀರಶೈವ ಲಿಂಗಾಯತ, ಕುರುಬ, ವಾಲ್ಮೀಕಿ, ಒಕ್ಕಲಿಗ ಸೇರಿದಂತೆ ನಾನಾ ಸಮುದಾಯಗಳು ಮೀಸಲಾತಿ ವಿಚಾರವಾಗಿ ಸರ್ಕಾರದ ಮೇಲೆ ತೀವ್ರ ಒತ್ತಡ ತರುತ್ತಿರುವ ವಿಚಾರದ ಬಗ್ಗೆ  ಸಚಿವ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚೆಯಾಗಿದೆ.  

Feb 19, 2021, 11:34 AM IST

ಬೆಂಗಳೂರು (ಫೆ. 19): ವೀರಶೈವ ಲಿಂಗಾಯತ, ಕುರುಬ, ವಾಲ್ಮೀಕಿ, ಒಕ್ಕಲಿಗ ಸೇರಿದಂತೆ ನಾನಾ ಸಮುದಾಯಗಳು ಮೀಸಲಾತಿ ವಿಚಾರವಾಗಿ ಸರ್ಕಾರದ ಮೇಲೆ ತೀವ್ರ ಒತ್ತಡ ತರುತ್ತಿರುವ ವಿಚಾರದ ಬಗ್ಗೆ  ಸಚಿವ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚರ್ಚೆಯಾಗಿದೆ.  ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಎಚ್ಚರಿಕೆ ಹೆಜ್ಜೆ ಇಡಲು ಸರ್ಕಾರ ತೀರ್ಮಾನಿಸಿದೆ.

ಶತಕ ಬಾರಿಸಿ ಮುನ್ನುಗ್ಗುತ್ತಿದೆ ಪೆಟ್ರೋಲ್, ವಾಹನ ಸವಾರರಿಗೆ ಬಿದ್ದಿದೆ ಬರೆ!

ಈ ವಿಚಾರದಲ್ಲಿ ಸರ್ಕಾರ ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ಕಾನೂನು ಚೌಕಟ್ಟಿನಲ್ಲೇ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡಿಕೆ, ಪ್ರಮಾಣ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದೊಂದಿಗೂ ಈ ಬಗ್ಗೆ ಚರ್ಚಿಸಬೇಕಾಗುತ್ತದೆ. ಹಾಗಾಗಿ ಈ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು. ಸಾಧ್ಯವಾದಷ್ಟುತಮ್ಮ ತಮ್ಮ ಸಮುದಾಯದ ಮಠಾಧೀಶರೊಂದಿಗೆ ಸಚಿವರು ಸಮಾಲೋಚನೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಿಕೊಡಿ ಎಂದು ಸರ್ಕಾರ ಸಲಹೆ ನೀಡಿದೆ.