ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲ ಸಭೆ: ಬಿ.ವೈ. ರಾಘವೇಂದ್ರಗೆ ಒಲಿಯಲಿದೆಯಾ ಮಂತ್ರಿ ಪಟ್ಟ ?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜುಲೈ 3 ರಂದು ಕೇಂದ್ರ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

First Published Jul 1, 2023, 2:47 PM IST | Last Updated Jul 1, 2023, 2:47 PM IST

ನವದೆಹಲಿ: ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಮಂತ್ರಿ ಮಂಡಲದ ಮಹತ್ವದ ಸಭೆ ನಡೆಯಲಿದೆ. ಸೋಲಿನ ಕಂಗೆಟ್ಟಿರುವ ರಾಜ್ಯ ಬಿಜೆಪಿ ನಾಯಕರಿಗೆ ಬೂಸ್ಟ್‌ ನೀಡುವ ಸಾಧ್ಯತೆ ಇದೆ. ಅಲ್ಲದೇ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಸದ್ಯಕ್ಕೆ ರಾಜ್ಯದ ಆರು ಜನ ಸಂಸದರು ಸಚಿವರಾಗಿದ್ದಾರೆ. ಈ ಮೂಲಕ ಹೊಸ ಮುಖಗಳಿಗೆ ಬಿಜೆಪಿ ಹೈಕಮಾಂಡ್ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗ್ತಿದೆ. ಲಿಂಗಾಯತರು ಬಿಜೆಪಿ ಮೇಲೆ ಮುನಿಸಿಕೊಂಡಿದ್ದಾರೆ ಎಂಬ ಆರೋಪವಿದ್ದು, ಇದನ್ನು ಶಮನ ಮಾಡಲು ರಾಘವೇಂದ್ರ ಅವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. 

ಇದನ್ನೂ ವೀಕ್ಷಿಸಿ: ಸಿ.ಟಿ.ರವಿ ತಮ್ಮ ಪಂಚೆ ಸರಿಮಾಡಿಕೊಳ್ಳಲಿ, ನಮ್ಮದನ್ನು ಯಾರೂ ಸರಿ ಮಾಡೋದು ಬೇಡ: ಚಲುವರಾಯಸ್ವಾಮಿ

Video Top Stories