ಅಕ್ಕಿ ಪೂರೈಕೆ ಒಪ್ಪಂದ ರದ್ದು, ಸಿಡಿದೆದ್ದ ಸಿದ್ದು: ಸವಾಲುಗಳಿಗೆ ಕಾಂಗ್ರೆಸ್ ಸರ್ಕಾರ ಬಳಿ ಇದ್ಯಾ ಮದ್ದು?
ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿಯನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ. ಹಾಗಾಗಿ ರಾಜ್ಯ ಸರ್ಕಾರ ಅಕ್ಕಿಗಾಗಿ ಏಜೆನ್ಸಿಗಳ ಜೊತೆ ಚರ್ಚೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ಜುಲೈ 1 ರಿಂದ ಹತ್ತು ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಅನ್ನಭಾಗ್ಯ ಅಡಿಯಲ್ಲಿ 10 ಕೆ.ಜಿ ಅಕ್ಕಿ ನೀಡಲು ನಿರ್ಧರಿಸಲಾಗಿತ್ತು. ಆದ್ರೆ ಇದೀಗ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿ ನೀಡಲು ನಿರಾಕರಿಸಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ 10 ಕೆ.ಜಿ. ಅಕ್ಕಿ ನೀಡುವುದು ಸ್ವಲ್ಪ ಕಷ್ಟಕರವಾದ ಕೆಲಸವಾಗಿದೆ. ಇದೀಗ ಸರ್ಕಾರದ ಮುಂದೆ ಹಲವು ಸವಾಲುಗಳಿದ್ದು, ಏನು ಮಾಡಲಿದೆ ಎಂಬುದು ತಿಳಿದಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅಕ್ಕಿಗಾಗಿ ಏಜೆನ್ಸಿಗಳ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಅಲ್ಲದೇ ಬೇರೆ ರಾಜ್ಯದ ಸರ್ಕಾರದ ಜೊತೆ ಅಕ್ಕಿ ಖರೀದಿಗೆ ಚಿಂತನೆ ನಡೆಸಲಾಗುತ್ತಿದೆ. ಆದ್ರೆ ರಾಜ್ಯದಿಂದ ರಾಜ್ಯಕ್ಕೆ ಅಕ್ಕಿ ಸಾಗಿಸುವುದೇ ಈಗ ದೊಡ್ಡ ಸವಾಲಾಗಿದೆ.
ಇದನ್ನೂ ವೀಕ್ಷಿಸಿ: ಕೋರ್ಟ್ ಆವರಣದಲ್ಲೆ ಹತ್ಯೆಗೆ ನಡೆದಿತ್ತು ಡೆಡ್ಲಿ ಪ್ಲಾನ್: ಬೆಚ್ಚಿ ಬೀಳಿಸಿದೆ ರೌಡಿ ಶೀಟರ್ ಹಾಕಿದ್ದ ಹತ್ಯೆ ಸ್ಕೆಚ್..!