ಈದ್ಗಾ ಮೈದಾನ ವಿಚಾರದಲ್ಲಿ ಅಬ್ಬರಿಸಿ ಕೋರ್ಟ್ ಮುಂದೆ ಥಂಡಾ ಹೊಡೆಯಿತಾ ಬಿಜೆಪಿ?
ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿದ್ದ ಬಿಜೆಪಿ ಸರ್ಕಾರ, ಹೈಕೋರ್ಟ್ ಮುಂದೆ ಯಥಾ ಸ್ಥಿತಿ ಕಾಪಾಡಿಕೊಳ್ಳಲು ನಮ್ಮ ತಕರಾರಿಲ್ಲ ಎಂದಿದೆ. ಇದರಿಂದ ಚಾಮರಾಜಪೇಟೆ ನಾಗರೀಕರ ಒಕ್ಕೂಟದ ಆಕ್ರೋಶ ಹೆಚ್ಚಾಗಿದೆ. ಹೈಕೋರ್ಟ್ ಆದೇಶದ ವಿರುದ್ದ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದೆ. ಇತ್ತ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಚಾಮರಾಜಪೇಟೆ ನಾಗರೀಕ ಒಕ್ಕೂಟಕ್ಕೆ ಹಿನ್ನಡೆಯಾಗಿದೆ. ಇಂದು ರಾಜ್ಯ ಹೈಕೋರ್ಟ್ ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ. ಆದೇಶಕ್ಕೂ ಮುನ್ನ ಕೋರ್ಟ್ ಸರ್ಕಾರವನ್ನುಈ ಕುರಿತು ಪ್ರಶ್ನಿಸಿತ್ತು. ಇದಕ್ಕೆ ಬಿಜೆಪಿ ಸರ್ಕಾರ ನಮ್ಮ ತಕರಾರಿಲ್ಲ ಎಂದು ಕೋರ್ಟ್ ಮುಂದೆ ಹೇಳಿದೆ. ಹೀಗಾಗಿ ಈದ್ಗಾ ಮೈದಾನ ಕಂದಾಯ ಇಲಾಖೆಯ ಆಸ್ತಿಯಾಗಿದ್ದರೂ, ಇದೀಗ ಮುಸ್ಲಿಮ್ ಧಾರ್ಮಿಕ ಆಚರಣೆ ಮಾಡಲು ಕೋರ್ಟ್ ಅವಕಾಶ ನೀಡಿದೆ. ಆದರೆ ಗಣೇಶೋತ್ಸವ ಸೇರಿದಂತೆ ಹಿಂದೂ ಹಬ್ಬಗಳ ಆಚರಣೆ ನಿರಾಕರಿಸಿಲಾಗಿದೆ. ಇದಕ್ಕೆ ರಾಜ್ಯ ಬಿಜೆಪಿ ಸರ್ಕಾರದ ಇಬ್ಬಗೆಯ ನೀತಿ ಕಾರಣ ಅನ್ನೋ ಆಕ್ರೋಶ ಹೆಚ್ಚಾಗಿದೆ. ಇದರೊಂದಿಗೆ ಡಿಕೆ ಶಿವಕುಮಾರ್ ಆಪ್ತನಿಗೆ ಸಿಬಿಐ ನೋಟಿಸ್, ಗುತ್ತಿಗೆದಾರರ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.