Karnataka election:ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಗಲಾಟೆ, ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಘರ್ಷಣೆ
ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಹಾಘೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದೆ. ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಉಂಟಾಗಿದೆ.
ದಕ್ಷಿಣ ಕನ್ನಡ (ಏ.17): ಬೆಳ್ತಂಗಡಿಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಹಾಘೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದೆ. ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಉಂಟಾಗಿದ್ದು, ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿಯಾಗಿದೆ.
ಸದ್ಯ ರಸ್ತೆ ತಡೆ ನಡೆಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪೊಲೀಸರ ಜೊತೆ ವಾಗ್ವಾದ ಮಾಡಿದ್ದಾರೆ. ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆ ನಂತರ ಬಿಜೆಪಿ ಕಾರ್ಯಕರ್ತರು ವಾಪಾಸ್ ತೆರಳುತ್ತಿದ್ದರು. ಈ ವೇಳೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ರಕ್ಷಿತ್ ಶಿವರಾಂ ನೇತೃತ್ವದ ಕಾಂಗ್ರೆಸ್ ತಂಡದ ರೋಡ್ ಶೋ ವೇಳೆ ಗಲಾಟೆ ನಡೆದಿದೆ.
ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕು ಮಿನಿ ವಿಧಾನಸೌಧದಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಸಾವಿರಾರು ಕಾರ್ಯಕರ್ತರ ಜೊತೆ ಆಗಮಿಸಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿದರು. ಸಂತೆಕಟ್ಟೆಯಿಂದ ಹರೀಶ್ ಪೂಂಜಾ ಬೃಹತ್ ರೋಡ್ ಶೋ ಮಾಡಿದರು. ಎರಡನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಪೂಂಜಾ ನಾಮಿನೇಷನ್ ಮಾಡಿದ್ದಾರೆ. ಬೆಳ್ತಂಗಡಿ ಹಾಲಿ ಬಿಜೆಪಿ ಶಾಸಕರಾಗಿರೋ ಹರೀಶ್ ಪೂಂಜಾ ವಿರುದ್ಧ ಈ ಬಾರಿ ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಸ್ಪರ್ಧೆ ಮಾಡುತ್ತಿದ್ದಾರೆ.