ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್, ಕ್ಯಾಬಿನೆಟ್‌ನಲ್ಲಿ ಮೀಸಲು ಪ್ರಮಾಣ ಘೋಷಣೆ?

ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣ ಮೀಸಲಾತಿ , ನಾಳೆ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಮಹತ್ವದ ನಿರ್ಧಾರ, ಸಿದ್ದರಾಮಯ್ಯ ಕ್ಷೇತ್ರಗೊಂದಲ ತೀವ್ರ, ಸಂಸದ ಪ್ರತಾಪ್ ಸಿಂಹ ತಿರುಗೇಟು, ರಾಹುಲ್ ಗಾಂಧಿಗೆ ಜೈಲು ಶಿಕ್ಷೆ, ಜಾಮೀನು ಮೇಲೆ ಹೊರಬಂದ ಕಾಂಗ್ರೆಸ್ ನಾಯಕ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಪಂಚಮಸಾಲಿ, ಒಕ್ಕಲಿಗ ಸಮುದಾಯ ಸೇರಿದಂತೆ ಹಲವರ ಮೀಸಲಾತಿ ಹೋರಾಟಕ್ಕೆ ತಾರ್ಕಿಕ ಅಂತ್ಯ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಮೀಸಲಾತಿ ಘೋಷಣೆ ಮಾಡಿದ ಬೆನ್ನಲ್ಲೇ ದಾಖಲಾಗಿದ್ದ ಪಿಐಎಲ್‌ನಿಂದ ಹೈಕೋರ್ಟ್ ಯಥಾಸ್ಥಿತಿ ಕಾಪಾಡಲು ಸೂಚಿಸಿತ್ತು. ಇದೀಗ ಕೇಂದ್ರ ಸರ್ಕಾರದ ಉತ್ತರ ಹಿನ್ನಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತೆರವು ನೀಡಿದೆ.ಮೀಸಲಾತಿ ಕುರಿತು ನಾಳೆ ಕ್ಯಾಬಿನೆಟ್‌ನಲ್ಲಿ ಮಹತ್ವದ ಸಭೆ ನಡೆಯಲಿದೆ. ಎಷ್ಟು ಪ್ರಮಾಣದ ಮೀಸಲಾತಿ ನೀಡಬೇಕು ಅನ್ನೋದು ನಾಳೆಯ ಸಭೆಯಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.ಒಕ್ಕಲಿಗರಿಗೆ ಶೇಕಡಾ 6, ಲಿಂಗಾಯಿತರಿಗೆ ಶೇಕಡಾ 7ರಷ್ಟು ಮೀಸಲಾತಿ ಸಿಗುವ ಸಾಧ್ಯತೆಗಳು ಇವೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video