ಶಿಗ್ಗಾಂವಿ ಕೋಟೆ ಭದ್ರಪಡಿಸಿಕೊಳ್ಳಲು ಸಿಎಂ ಮಾಸ್ಟರ್ ಪ್ಲ್ಯಾನ್: ಬೊಮ್ಮಾಯಿ ಸ್ಟಾಟರ್ಜಿಗೆ 'ಕೈ' ಸುಸ್ತು..?
ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಚುನಾವಣೆ ಹತ್ತರವಾಗ್ತಿದ್ದಂತೆ ರ್ಯಾಲಿ, ಯಾತ್ರೆಗಳ ಜತೆಗೆ ತಮ್ಮ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಗೆಲುವು ಸುಲಭಗೊಳಿಸಲು ಮಾಸ್ಟರ್‌ಪ್ಲಾನ್ ರೂಪಿಸುತ್ತದ್ದಾರೆ. ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಎಲೆಕ್ಷನ್ ಸ್ಟಾಟರ್ಜಿಗೆ ಕೈ ನಾಯಕರು ಸುಸ್ತು ಹೊಡೆದಿದ್ದಾರೆ ಎನ್ನಲಾಗುತ್ತಿದೆ. ತಮ್ಮ ಕ್ಷೇತ್ರದ ಕೋಟೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಭದ್ರಪಡಿಸಿಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ರೂ, ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೊಂದರೆಯಾಗದಂತೆ ರಣತಂತ್ರ ರೂಪಿಸುತ್ತಿದ್ದಾರೆ. ಮಾರ್ಚ್ ತಿಂಗಳಲ್ಲೇ ಬೊಮ್ಮಾಯಿ 9 ಬಾರಿ ಶಿಗ್ಗಾಂವಿಗೆ ಭೇಟಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಹಲವರಿಗೆ ನಿಗಮಗಳ ಸ್ಥಾನಮಾನ ನೀಡುತ್ತಿದ್ದಾರೆ. ತಮ್ಮ ಪರಮಾಪ್ತರಿಗೆ ನಿಗಮ ಮಂಡಳಿಯಲ್ಲಿ 40ಕ್ಕೂ ಹೆಚ್ಚು ಸ್ಥಾನ ನೀಡಿದ್ದಾರೆ.