ದೀಪಾವಳಿ ಬಳಿಕ ಸಂಪುಟ ವಿಸ್ತರಣೆ?: ಸಿಎಂ ಬೊಮ್ಮಾಯಿ ಕೊಟ್ರು ಸುಳಿವು

ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆಗಳು ಚುರುಕಾಗಿದ್ದು, ಈಗಾಗಲೇ ಜನಸಂಕಲ್ಪ ಯಾತ್ರೆ ಆರಂಭವಾಗಿದೆ. ಇದರ ನಡುವೆ ಸಿಎಂ ಬೊಮ್ಮಾಯಿ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ.

First Published Oct 22, 2022, 6:08 PM IST | Last Updated Oct 22, 2022, 6:08 PM IST

ದೀಪಾವಳಿ ಬಳಿಕ ಸಂಪುಟ ವಿಸ್ತರಣೆ ಖಚಿತ ಎಂದು ಹೇಳಲಾಗುತ್ತಿದ್ದು, ಮುಂದಿನ ವಾರವೇ ದೆಹಲಿಗೆ ಬೊಮ್ಮಾಯಿ ತೆರಳಲಿದ್ದಾರೆ. ವರಿಷ್ಠರ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಿದ್ದು, ಹಲವು ಮಾನದಂಡಗಳ ಮೇಲೆ ಸಚಿವ ಸ್ಥಾನ ಹಂಚಿಕೆಯಾಗಲಿದೆ. ಹೈಕಮಾಂಡ್ ಗ್ರೀನ್ ಸಿಗ್ನಲ್ ನಿರೀಕ್ಷೆಯಲ್ಲಿ ಸಿಎಂ ಇದ್ದು, ಈಶ್ವರಪ್ಪ, ಜಾರಕಿಹೊಳಿಗೂ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.