ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ಅಸ್ತ್ರ?
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್ ಹಗರಣದ ಮೂಲಕ 8 ಸಾವಿರ ಕೋಟಿ ರು.ಗಳಷ್ಟು ಬೃಹತ್ ಭ್ರಷ್ಟಾಚಾರ ನಡೆದಿದೆ. ನ್ಯಾ. ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು.
ಬೆಂಗಳೂರು (ಫೆ.25): ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅರ್ಕಾವತಿ ಡಿನೋಟಿಫಿಕೇಷನ್ ಹಗರಣದ ಮೂಲಕ 8 ಸಾವಿರ ಕೋಟಿ ರು.ಗಳಷ್ಟು ಬೃಹತ್ ಭ್ರಷ್ಟಾಚಾರ ನಡೆದಿದೆ. ನ್ಯಾ. ಕೆಂಪಣ್ಣ ಆಯೋಗದ ವರದಿ ಆಧಾರದ ಮೇಲೆ ಈ ಹಗರಣದಲ್ಲಿ ಯಾರ್ಯಾರು ಇದ್ದಾರೆ ಎಂಬ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಲಾಗುವುದು. ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುವ ಸಂದರ್ಭದಲ್ಲಿ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ಕುರಿತು ನ್ಯಾ.ಕೆಂಪಣ್ಣ ಆಯೋಗ ಸಲ್ಲಿಸಿದ್ದ ವರದಿಯ ಆಯ್ದ ಭಾಗವನ್ನು ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪಿಸಿದ್ದರು.
ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸರ್ಕಾರದಿಂದ ಅರ್ಕಾವತಿ ತನಿಖಾಸ್ತ್ರ ಪ್ರಯೋಗಿಸುತ್ತಾ ಎಂಬುದನ್ನು ಕಾದು ನೋಡಬೇಕಿದೆ. ‘ಜಮೀನು ಮಾಲೀಕರ ಹಿತಾಸಕ್ತಿಗಾಗಿ 800ಕ್ಕೂ ಹೆಚ್ಚು ಎಕರೆ ಜಮೀನನ್ನು ‘ರೀಡೂ’ ಹೆಸರಿನಲ್ಲಿ ಡಿನೋಟಿಫಿಕೇಷನ್ ಮಾಡಿರುವುದು ಸತ್ಯ’ ಎಂದು ವರದಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಈ ವರದಿ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೆ ಸಿದ್ದರಾಮಯ್ಯ ತಮ್ಮ ಅವಧಿಯ ಹಗರಣ ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದರು ಎಂದೂ ಆರೋಪಿಸಿದರು. ಇನ್ನು ನಾನು ಅಧಿಕಾರಕ್ಕೆ ಬರುವ ಮುನ್ನವೇ ಅರ್ಕಾವತಿ ಲೇಔಟ್ ಡಿನೋಟಿಫೈ ಆಗಿತ್ತು. ನಾನು ಮಾಡಿದ್ದು ‘ರೀಡೂ’ ಅಲ್ಲ. ಸುಪ್ರೀಂಕೋರ್ಟ್ ಮಾನದಂಡದ ಮೇಲೆ ನಾನು ಅನುಮೋದನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.