ಸಿಎಂ ತವರಿನಲ್ಲಿ ನಾಮಿನೇಷನ್‌ ಜಾತ್ರೆ,ಶಿಗ್ಗಾವಿಯಲ್ಲಿ ಬೊಮ್ಮಾಯಿ ಶಕ್ತಿ ಪ್ರದರ್ಶನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೇ ಶಿಗ್ಗಾವಿ ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ 
 

Share this Video
  • FB
  • Linkdin
  • Whatsapp

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೇ ಶಿಗ್ಗಾವಿ ನಗರದಲ್ಲಿ ಬೃಹತ್‌ ರೋಡ್‌ ಶೋ ನಡೆಸಲಿದ್ದು, ಸಾವಿರಾರು ಬಿಜೆಪಿ ಕಾರ್ಯಕರ್ತರು ರೋಡ್‌ ಶೋನಲ್ಲಿ ಭಾಗಿಯಾಗಲಿದ್ದಾರೆ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿರುವ ನಟ ಕಿಚ್ಚ ಸುದೀಪ್‌ ನಾಮಪತ್ರ ಸಲ್ಲಿಕೆ ವೇಳೆ ಹಾಜರಾಗಲಿದ್ದಾರೆ. ಶಿಗ್ಗಾವಿ ನಗರದಲ್ಲಿ ನಡೆಯಲಿರುವ ಸಿಎಂ ಶಕ್ತಿ ಪ್ರದರ್ಶನ ಮೆರವಣಿಗೆಯಲ್ಲಿ ನಟ ಕಿಚ್ಚ ಸುದೀಪ್‌ ಜತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕೂಡ ಮೆರವಣಿಗೆಯಲ್ಲಿ ಭಾಗಿಯಾಗಲಿದ್ದಾರೆ. ಶಿಗ್ಗಾಂವಿ ಪಟ್ಟಣದ ಸಂತೆ ಮೈದಾನದಿಂದ ಬೃಹತ್‌ ಮೆರವಣಿಗೆ ಸಾಗಲಿದ್ದು ತಾಲ್ಲೂಕು ಕ್ರೀಡಾಂಗಣದವರೆಗೆ ಎರಡು ಕೀ ಮೀ ರೋಡ್‌ ಶೋ ನಡೆಸಲಿದ್ದಾರೆ. 

Related Video