ಕೇಂದ್ರ ಬಜೆಟ್‌ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲ: ಸಿಎಂ ಬೊಮ್ಮಾಯಿ
ಇಂದು ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಬಜೆಟ್'ನಿಂದ ಬರಗಾಲ ಪೀಡಿತ ಪ್ರದೇಶ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ರಾಷ್ಟೀಯ ಯೋಜನೆಯಾಗಿ ಘೋಷಿಸುವಂತೆ ಕೇಳಿದ್ದೆವು, ದೊಡ್ಡ ಪ್ರಮಾಣದ ಅನುದಾನ ಘೋಷಿಸಿದ್ದು ಸಂತಸ ತಂದಿದೆ ಎಂದರು. ಕರ್ನಾಟಕಕ್ಕೆ ಈ ಯೋಜನೆ ಬಹಳ ಪ್ರಮುಖವಾಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಘೋಷಣೆಯಾಗಿದೆ. ಇದನ್ನು ಸ್ವಾಗತ ಮಾಡುತ್ತೇನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕಿಂತ ಹೆಚ್ಚು ಎಕರೆ ಪ್ರದೇಶಕ್ಕೆ ನೀರಾವರಿ ಮತ್ತು ಕುಡಿಯುವ ನೀರಿನ ಒಂದು ಮಹತ್ವದ ಯೋಜನೆ ಇದಾಗಿದೆ ಎಂದು ಅವರು ಹೇಳಿದರು.