ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ, ಕಾಂಗ್ರೆಸ್ ಷಡ್ಯಂತ್ರವೆಂದ ಸಿಎಂ
ಬಿಎಸ್‌ವೈ ಮನೆ ಮೇಲೆ ಕಲ್ಲುತೂರಾಟ ಮಾಡಿದ್ದರ ಬಗ್ಗೆ ಸಿ ಎಂ ಬೊಮ್ಮಾಯಿ ಮಾತನಾಡಿದ್ದು ಇದು ಕಾಂಗ್ರೆಸ್ ಷಡ್ಯಂತ್ರ ಎಂದು ಹೇಳಿದ್ದಾರೆ.
ಬಂಜಾರ ಮತ್ತು ಭೋವಿ ಸಮುದಾಯ ನಡೆಸುತ್ತಿರುವ ಪ್ರತಿಭಟನೆಗೆ ಸ್ಥಳೀಯ ಕಾಂಗ್ರೆಸ್ ನಾಯಕರ ಪ್ರಚೋದನೆಯಿದೆ. ಬಿಜೆಪಿ ಸಾಮಾಜಿಕ ನ್ಯಾಯ ಕೊಟ್ಟ ಮೇಲೆ ಕಾಂಗ್ರೆಸ್ ನವರಿಗೆ ತಡೆದುಕೊಳ್ಳಲಾಗದೇ ಹಿಂಸೆಗೆ ಪ್ರಚೋದನೆ ನೀಡುತ್ತಿದ್ದಾರೆ. ಇದಕ್ಕೆ ಬಂಜಾರ ಸಮುದಾಯ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ಎಜೆ ಸದಾಶಿವ ಸಮಿತಿಯ ವರದಿಯನ್ನು ಜಾರಿಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬಂಜಾರ ಮತ್ತು ಭೋವಿ ಸಮುದಾಯದವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಬಗ್ಗೆ ಕಲಬುರಗಿಯಲ್ಲಿ ಸಿ ಎಂ ಬೊಮ್ಮಾಯಿ ಮಾತನಾಡಿದ್ದಾರೆ.