ಪ್ರಧಾನಿ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ: ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹೈವೋಲ್ಟೇಜ್ ಕಾರ್ಯಕಾರಿಣಿ ಸಭೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕಾರ್ಯಾಕಾರಿಣಿ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿವರಣೆ ಪಡೆದಿದ್ದಾರೆ. ರಾಜ್ಯದ ಪ್ರಸ್ತುತ ರಾಜಕೀಯ ಸ್ಥಿತಿಗತಿ ಹಾಗೂ ನಾಯಕರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ರಾಜ್ಯಾಧ್ಯಕ್ಷ ಕಟೀಲ್ ಅವರಿಂದ ರಿಪೋರ್ಟ್ ಸಲ್ಲಿಸಲಾಗಿದೆ. ಕರ್ನಾಟಕ ಸೇರಿ 9 ರಾಜ್ಯಗಳ ಚುನಾವಣೆ ಕುರಿತು ಚರ್ಚೆ ನಡೆದಿದೆ. ಹೈಕಮಾಂಡ್ ಕರ್ನಾಟಕಕ್ಕೆ ಮೊದಲ ಆದ್ಯತೆ ನೀಡಿದೆ. ಸುಮಾರು 5 ಗಂಟೆ ನಡೆದ ಬಿಜೆಪಿ ಕಾರ್ಯಕಾರಿಣಿ ಮೀಟಿಂಗ್'ನಲ್ಲಿ ಎಲ್ಲಾ ರಾಜ್ಯಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ಸಲಹೆ ನೀಡಿ ಬಿಜೆಪಿಯ ಸಾಧನೆಗಳನ್ನು ಮತದಾರರಿಗೆ ತಿಳಿಸಲು ಸೂಚನೆ ನೀಡಿದ್ದಾರೆ.
ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'