ಶೆಟ್ಟರ್ ರಾಜೀನಾಮೆ ನೋವು ತಂದಿದೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಬಿಜೆಪಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಾಲು ಸಾಲು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಹಿರಿಯ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಸಿ ಎಂ ಬೊಮ್ಮಾಯಿ ಅವರ ರಾಜೀನಾಮೆ ಘೋಷಣೆ ನೋವು ತಂದಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಬಿಜೆಪಿ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ಸಾಲು ಸಾಲು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಹಿರಿಯ ನಾಯಕ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಸಿ ಎಂ ಬೊಮ್ಮಾಯಿ ಅವರ ರಾಜೀನಾಮೆ ಘೋಷಣೆ ನೋವು ತಂದಿದೆ ಎಂದು ಹೇಳಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ಬಿಜೆಪಿ ಜತೆ ಜಗದೀಶ್ ಶೆಟ್ಟರ್ ಉತ್ತಮ ಸಂಬಂಧ ವಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಚಿಂತನೆ ಮತ್ತು ಬಿ.ಎಸ್.ಯಡಿಯೂರಪ್ಪ ಅವರ ನಡೆ ಪಕ್ಷಕ್ಕೆ ಆದರ್ಶವಾಗಿದೆ.ಶೆಟ್ಟರ್ ಅವರನ್ನು ಭೇಟಿ ಮಾಡಿದ್ದ ಕೇಂದ್ರ ನಾಯಕತ್ವ ದೊಡ್ಡ ಹುದ್ದೆ ಕೊಡುತ್ತೇವೆಂದು ಹೇಳಿದ್ದರು. ದೆಹಲಿ ಮಟ್ಟದಲ್ಲಿ ಹುದ್ದೆ ನೀಡುವುದಾಗಿ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರು ಭರವಸೆ ನೀಡಿದ್ದರು. ನಿನ್ನೆ ಕೂಡ ನಾನು ಶೆಟ್ಟರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೆ ಎಂದು ಹೇಳಿದರು.