ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್
ಮಹದಾಯಿ ನೀರಿನ ವಿಚಾರವಾಗಿ ಹೋರಾಟ ನಡೆಸಲು ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಹಾಗೂ ಗೋವಾ ಸಿಎಂ ಪ್ರಮೋದ್ ಸಾವಂತ್ ಒಂದಾಗಿರುವಂತೆ ಕಾಣುತ್ತದೆ.
ಮಹದಾಯಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಗೋವಾಕ್ಕೆ ಸಾಥ್ ನೀಡುತ್ತಿದ್ದಾರೆ ಎನ್ನಲಾಗ್ತಿದೆ. ಮಹಾರಾಷ್ಟ್ರ ಸಿಎಂ ಹಾಗೂ ಗೋವಾ ಸಿಎಂ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಮಹದಾಯಿ ನೀರಿನ ವಿಚಾರವಾಗಿ ರಾಜ್ಯಗಳ ನಡುವೆ ದಶಕಗಳಿಂದ ಹೋರಾಟ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಮಹಾರಾಷ್ಟ್ರ ಹಾಗೂ ಗೋವಾ ಸರ್ಕಾರ ಒಟ್ಟಾಗಿ ಹೋರಾಟ ಮಾಡಲು ಮುಂದಾಗಿವೆ. ಮಹಾರಾಷ್ಟ್ರದ ತಿಲಾರಿ ಅಣೆಕಟ್ಟು ಯೋಜನೆ ಸಂಬಂಧ ಜೂನ್ 17 ರಂದು ಮುಂಬೈನಲ್ಲಿ ಸಭೆ ನಡೆದಿದೆ. ಇದು ಅಂತಾರಾಜ್ಯ ನಿಯಂತ್ರಣ ಮಂಡಳಿ ಸಭೆಯಾಗಿದೆ.ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮತ್ತು ಗೋವಾ ಜಲಸಂಪನ್ಮೂಲ ಸಚಿವ ಸುಭಾಷ್ ಶಿರೋಡ್ಕರ್ ಭಾಗಿಯಾಗಿದ್ದರು.
ಇದನ್ನೂ ವೀಕ್ಷಿಸಿ: ಇಂದಿನಿಂದ ಉಚಿತ ವಿದ್ಯುತ್‌ಗೆ ಅರ್ಜಿ ಹಾಕಿ: ‘ಗೃಹಜ್ಯೋತಿ’ ಯೋಜನೆ ಅರ್ಜಿ ಸ್ವೀಕಾರ ಆರಂಭ