2 ತಿಂಗಳ ವಿದ್ಯುತ್ ಬಿಲ್ ಒಟ್ಟಿಗೆ ಬಂದಿದೆ, ಮುಂದಿನ ತಿಂಗಳಿಂದ ಕರೆಕ್ಟಾಗಿ ಬರುತ್ತೆ: ಸಿಎಂ ಸಿದ್ದರಾಮಯ್ಯ

ವಿದ್ಯುತ್ ದರ ಏರಿಕೆ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ತಿಂಗಳ ಹೆಚ್ಚುವರಿ ದರ ಸೇರಿ ಒಂದೇ ಬಿಲ್ ಬಂದಿದ್ದರಿಂದ ಈ ತಿಂಗಳು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ.18): ವಿದ್ಯುತ್ ದರ ಏರಿಕೆ ಕುರಿತು ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎರಡು ತಿಂಗಳ ಹೆಚ್ಚುವರಿ ದರ ಸೇರಿ ಒಂದೇ ಬಿಲ್ ಬಂದಿದ್ದರಿಂದ ಈ ತಿಂಗಳು ವಿದ್ಯುತ್ ಶುಲ್ಕದಲ್ಲಿ ಹೆಚ್ಚಳವಾಗಿದೆ ಎಂದರು. ಮುಂದಿನ ತಿಂಗಳಿನಿಂದ ಒಂದೇ ತಿಂಗಳ ಬಿಲ್ ಬರುವುದರಿಂದ ಎಲ್ಲವೂ ಸರಿಯಾಗಲಿದೆ. ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಎಫ್‌ಕೆಸಿಸಿಯವರ ಜೊತೆಗೆ ಸಂಬಂಧಿಸಿದ ಸಚಿವರು ಮಾತನಾಡಿ ಮನವೊಲಿಸಲಿದ್ದಾರೆ ಎಂದು ಅವರು ತಿಳಿಸಿದರು. ಇದೇ ವೇಳೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸುವ ಕೆಲಸ ಮಾಡಲಿ, ಬಡವರ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಏಕೆ ಅಡ್ಡಿಪಡಿಸಬೇಕು, ದ್ವೇಷ ರಾಜಕಾರಣ ಯಾಕೆ ಮಾಡುತ್ತಿದೆ ಎಂದು ಪ್ರಶ್ನಿಸಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video