ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡ್ತಾರೆ: ಸಿಎಂ ಸಿದ್ದರಾಮಯ್ಯ

ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಜು.29): ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುವವರು ಎಂದು ಕಿಡಿಕಾರಿದರು. ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದರು. ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿಯ ವಿಡಿಯೋ ಚಿತ್ರೀಕರಣ ಪ್ರಕರಣ ರಾಜ್ಯಾದ್ಯಂತ ಸಾಕಷ್ಟು ಸದ್ದು ಮಾಡುತ್ತಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಈ ನಡುವೆ ಕೇಂದ್ರ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಉಡುಪಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಆದರೆ ಶೌಚಾಲಯದಲ್ಲಿ ಗುಪ್ತ ಕ್ಯಾಮೆರಾವನ್ನು ಅಳವಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆದರೆ ಮತ್ತೊಂದು ಕಡೆಯಲ್ಲಿ ಉಡುಪಿ ಘಟನೆಯನ್ನು ಎನ್‌ಐಎಗೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

Related Video