100 ಪ್ರಕರಣ ಹಾಕಿಸಿದರೂ ನಾನು ಜಗ್ಗುವುದಿಲ್ಲ, ಮೋದಿ-ಶಾ ಬೆಂಬಲ ಇರೋವರೆಗೆ ನಾನೇ ಸಿಎಂ..!

ಸಿದ್ದರಾಮಯ್ಯ ಅವರು ಪ್ರತಿ ಬಾರಿ ಅಪವಿತ್ರ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದಾಗಿ ಹೇಳುತ್ತಾರೆ. ಆದರೆ, ಕಳೆದ ಬಾರಿ ಕಾಂಗ್ರೆಸ್‌ ಪಕ್ಷವನ್ನು ಜನರು ತಿರಸ್ಕರಿಸಿದರೂ ಜೆಡಿಎಸ್‌ನವರೊಂದಿಗೆ (ಕಾಂಗ್ರೆಸ್‌) ಅಪವಿತ್ರ ಮೈತ್ರಿ ಮಾಡಿಕೊಂಡಿದ್ದನ್ನು ಮರೆಯುತ್ತಾರೆ ಎಂದು ಬಿಎಸ್‌ವೈ ವಾಗ್ದಾಳಿ ನಡೆಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 06): ‘ನಾನು ಬೇಲ್‌ ಮೇಲೆ ಇದ್ದೇನೆ ಎಂದು ಹೇಳುತ್ತೀರಲ್ಲ ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ರಾಷ್ಟ್ರೀಯ ಕಾಂಗ್ರೆಸ್‌ ನಾಯಕರೇ ಜಾಮೀನಿನ ಮೇಲೆ ಹೊರಗಿಲ್ಲವೇ? ಇದಕ್ಕೆ ಏನು ಹೇಳುತ್ತೀರಿ? ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ, ಸಚಿವರ ಮೇಲೆ ಸುಳ್ಳು ದೂರು ದಾಖಲಿಸುತ್ತಿದ್ದಾರೆ. ಇದರಿಂದ ಕೇಸ್‌ಗಳಾಗುತ್ತವೆ. ಇಂತಹ 100 ಕೇಸು ಹಾಕಿದರೂ ಜಗ್ಗುವುದಿಲ್ಲ...’ ಆಗಾಗ ತಮ್ಮನ್ನು ಜಾಮೀನಿನ ಮೇಲೆ ಹೊರಗಿರುವ ಮುಖ್ಯಮಂತ್ರಿ ಎಂದು ಲೇವಡಿ ಮಾಡುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿರುಗೇಟು ನೀಡಿದ ಪರಿಯಿದು.

ರೈತ ಹೋರಾಟದಲ್ಲಿ ವಿದೇಶಿ ಪಿತೂರಿ ಬಟಾ ಬಯಲು; ತನಿಖಾ ಸಂಸ್ಥೆಗಳಿಂದ ಮಾಹಿತಿ!

Related Video