ಸಂಪುಟ ವಿಸ್ತರಣೆಯೋ, ಪುನಾರಚನೆಯೋ? ಕುತೂಹಲ ಮೂಡಿಸಿದೆ ಮೋದಿ-ಬಿಎಸ್‌ವೈ ಭೇಟಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಇಂದಿನಿಂದ ಪ್ರಾರಂಭವಾಗಿದ್ದು, ಮೂರು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಬೆಂಗಳೂರು (ಸೆ. 17): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ದೆಹಲಿ ಭೇಟಿ ಇಂದಿನಿಂದ ಪ್ರಾರಂಭವಾಗಿದ್ದು, ಮೂರು ದಿನಗಳ ಕಾಲ ದೆಹಲಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಪ್ರಧಾನಿ ಮೋದಿ, ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿ, ಮಳೆಯಿಂದಾಗಿರುವ ನಷ್ಟಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಿದ್ದಾರೆ.
ಕೊರೊನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ