ಮಾಡಾಳ್ ಬಂಧನ ಆಗ್ರಹಿಸಿ ಮಾ.9ಕ್ಕೆ ಕರ್ನಾಟಕ ಬಂದ್ಗೆ ಕರೆ, ಎಕ್ಸ್ಪ್ರೆಸ್ವೇ ಮೇಲೆ ಕಾಂಗ್ರೆಸ್ ಸವಾರಿ !
ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆ, ಲಂಚ ಪ್ರಕರಣ ನಡೆದು 5 ದಿನ ಆದರೂ ಪತ್ತೆ ಇಲ್ಲ,ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಮಾಡಾಳ್ ವಿರೂಪಾಕ್ಷಪ್ಪ, ಕಾಂಗ್ರೆಸ್ ಹಾರಲು ಸಜ್ಜಾದ ಬಿಜೆಪಿ ಸಚಿವ ಕೆಸಿ ನಾರಾಯಣಗೌಡ, 2018ರಲ್ಲಿ ಮೋದಿ ಘೋಷಿಸಿದ ಎಕ್ಸ್ಪ್ರೆಸ್ವೇ, ಇದೀಗ ಕ್ರೆಡಿಟ್ ಪಡೆಯಲು ಕಾಂಗ್ರೆಸ್ ತಯಾರು ಸೇರಿದಂತೆ ಇಂದಿನ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಲಂಚ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ 5 ದಿನಗಳಾದರೂ ಪತ್ತೆ ಇಲ್ಲ. ಇದರ ನಡುವೆ ಮಾಡಾಳ್ ವಕೀಲರು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಮಾಡಾಲ್ ವಿರೂಪಾಕ್ಷಪ್ಪ ಬಂಧನ ಖಚಿತ. ಭ್ರಷ್ಟಾಚಾರವನ್ನು ಬಿಜೆಪಿ ಸಹಿಸಲ್ಲ. ಮಾಡಾಳ್ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಹೈಕಮಾಂಡ್ಗೆ ಸೂಚನೆ ನೀಡಿದ್ದೇವೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬಿಜೆಪಿ ಶಾಸಕ ಮಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಮಾರ್ಚ್ 9ಕ್ಕೆ ಕರ್ನಾಟಕ ಬಂದ್ಗೆ ಕರೆ ನೀಡಿದೆ. ಎರಡು ಗಂಟೆಗಳ ಕಾಲ ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಬಂದ್ ಮಾಡಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಬಂದ್ ಆಗುವ ಕಾಲದಲ್ಲಿದೆ. ಇದೀಗ ಕರ್ನಾಟಕ ಬಂದ್ ಮಾಡಲು ಹೊರಟಿದ್ದಾರೆ ಎಂದು ಸಿಎಂ ಬೊಮ್ಮಾಯಿ ವ್ಯಂಗ್ಯವಾಡಿದೆ.