ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅಂತ ಬಿಜೆಪಿಯವರಿಗೆ ಗೊತ್ತಿಲ್ಲ ಅಂತ ಕಾಣ್ಸತ್ತೆ: ಕುಸುಮಾ

RR ನಗರ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 28): RR ನಗರ ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. 

'ಮುಂದೊಂದು ದಿನ ಸಿದ್ದರಾಮಯ್ಯನವರು ರಾಜಕಾರಣದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಆಗ್ತಾರೆ'

'ಜನರಿಂದ ಇಷ್ಟು ಅಭೂತಪೂರ್ವ ಪ್ರತಿಕ್ರಿಯೆ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ಜನರ ಪ್ರತಿಕ್ರಿಯೆ ತುಂಬಾ ಖುಷಿ ಕೊಡುತ್ತಿದೆ. 2015 ರಲ್ಲಿ ಆದ ಕಹಿ ಘಟನೆಯಿಂದ ಆದ ನೋವು. ಬೇಸರವನ್ನು ಜನರ ಪ್ರೋತ್ಸಾಹ ಕಡಿಮೆ ಮಾಡುತ್ತಿದೆ. ನಾನು ನನ್ನ ಪಾಡಿಗೆ ಪ್ರಚಾರ ಮಾಡುತ್ತಿದ್ದೇನೆ. ಬಿಜೆಪಿ ಕಾರ್ಯಕರ್ತರು ಗೂಂಡಾ ರೀತಿ ವರ್ತಿಸಿ ನನಗೆ ಅಡ್ಡಿಪಡಿಸುತ್ತಿದ್ದಾರೆ. ಇದು ಸರಿಯಲ್ಲ. ನಾನು ಯಾವ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ ಅನ್ನೋದು ಅವರಿಗೆ ಗೊತ್ತಿಲ್ಲ. ದೇಶಕ್ಕಾಗಿ ಪ್ರಾಣಕೊಟ್ಟ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಪಕ್ಷದಿಂದ ಸ್ಪರ್ಧಿಸುತ್ತಿದ್ದೇನೆ. ನನ್ನ ಮನೋಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ' ಎಂದು ಹೇಳಿದ್ಧಾರೆ.

Related Video