ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ, ಕೆಲಸ ಮಾಡಿ ತೋರಿಸುತ್ತೇನೆ: ಸಾಗರ್ ಖಂಡ್ರೆ

ಬೀದರ್ ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ.ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ  ಹೇಳಿಕೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬೀದರ್ (Bidar) ಜನತೆ ನನಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿದಾರೆ.ಅದಕ್ಕೆ ತಕ್ಕಂತೆ ನಾನು ಕೆಲಸ ಮಾಡಿ ತೋರಿಸುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ (Congress candidate Sagar Khandre) ಹೇಳಿಕೆ ನೀಡಿದ್ದಾರೆ. ಈ ವೇಳೆ,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸೋನಿಯಾ ಗಾಂಧಿ, ಸಿದ್ದರಾಮಯ್ಯ (Siddaramaiah) ಸೇರಿದಂತೆ ಎಲ್ಲಾ ನಾಯಕರಿಗೂ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯ ಹಿರಿಯ ಮುಖಂಡರು, ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸುತ್ತೇನೆ, ಭಗವಂತ ಅವರು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಿಲ್ಲ, ಹೀಗಾಗಿ ಜನರು ಬದಲಾವಣೆ ಬಯಸುತ್ತಿದ್ದರು ಎಂದು ಹೇಳಿದ್ದಾರೆ.

ಹೊಸಬರಿಗೆ ಅವಕಾಶ ಕೊಡಬೇಕೆಂದು ಎಲ್ಲರೂ ಹೇಳುತ್ತಿದ್ದರು. ಅದರಂತೆ ನನಗೆ ಅವಕಾಶ ಕೊಟ್ಟಿದ್ದಾರೆ, ಒಳ್ಳೆಯ ಕೆಲಸ ಮಾಡುತ್ತೇನೆ, ಜನ ನನ್ನ ಮೇಲೆ ನಂಬಿಕೆ ಇಟ್ಟಿದಕ್ಕೆ ತುಂಬ ಧನ್ಯವಾದ ಸಲ್ಲಿಸುತ್ತೇನೆ. ಜಿಲ್ಲೆಯಲ್ಲಿ ಸಾಕಷ್ಟು ಸಮಸ್ಯೆಗಳು ಇವೆ, ಒಂದೊಂದಾಗಿ ಕೆಲಸ ಮಾಡಿ ತೋರಿಸುತ್ತೇನೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: ನಾವು ಈ ಬಾರಿ ಒಳ್ಳೆಯ ಚುನಾವಣೆ ಮಾಡಿದ್ದು, ಇನ್ನು ಉತ್ತಮವಾಗಿ ಮಾಡಬಹುದಿತ್ತು: ಕಾಂಗ್ರೆಸ್ ಅಭ್ಯರ್ಥಿ ಗೌತಮ್

Related Video