Asianet Suvarna News Asianet Suvarna News

ಗ್ಯಾರಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್‌ನಿಂದ ಜನತೆಗೆ ದೋಖಾ : ಬಸವರಾಜ ಬೊಮ್ಮಾಯಿ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್  ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್‌ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ ಅಂತ ಜನರಿಗೆ ಭರವಸೆ ನೀಡಿ, ಈಗ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ. ತಾತ್ವಿಕ ಆದೇಶದಲ್ಲಿಯೂ ಎಲ್ಲರಿಗೂ ಉಚಿತ ಎಂದು ಹೇಳಿದ್ದರು. ಈಗ ಬೇರೆ ಬೇರೆ ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ನವರು ಹೇಳುವುದೊಂದು ಮಾಡುವುದೊಂದು. ಅವರ ಬಣ್ಣ ಬಯಲಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ವೀಕ್ಷಿಸಿ: ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದ ಧನುಷ್ ಕುಮಾರ್: ಯುಪಿಎಸ್‌ಸಿಯಲ್ಲಿ 501ನೇ ರ‍್ಯಾಂಕ್‌ ಪಡೆದಿದ್ದು ಹೇಗೆ?