Asianet Suvarna News Asianet Suvarna News

ಮತಾಂತರ ನಿಷೇಧ ತಿದ್ದುಪಡಿ ಕಾಯ್ದೆ ರದ್ದು: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಪ್ರಮುಖ ಅಂಶಗಳ ಕುರಿತು ಚರ್ಚೆ ನಡೆದಿದೆ. ಈ ವೇಳೆ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಅಸ್ತು ಎನ್ನಲಾಗಿದೆ.

First Published Jun 16, 2023, 10:29 AM IST | Last Updated Jun 16, 2023, 10:29 AM IST

ಬೆಂಗಳೂರು : ಮತಾಂತರ ನಿಷೇಧ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಲು ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದೆ. ಈ ಕಾಯ್ದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ 2022 ತಿದ್ದುಪಡಿ ರದ್ದು ಮಾಡಲು ಸಂಪುಟ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಹೇಳಿದರು.ಇದೀಗ ಮೂರನೇ ಕ್ಯಾಬಿನೆಟ್ ಸಭೆಯಲ್ಲೇ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ಕೊಡಲಾಗಿದೆ. ಈ ಕುರಿತು ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಲು ನಿರ್ಧಾರ ಮಾಡಲಾಗಿದೆ.

ಇದನ್ನೂ ವೀಕ್ಷಿಸಿ: ಶಾಸಕರ ಮಗನಿಂದ ಮುಖ್ಯೋಪಾಧ್ಯಾಯರಿಗೆ ಜೀವ ಬೆದರಿಕೆ ಆರೋಪ: ಆಡಿಯೋ ಕ್ಲಿಪ್‌ ವೈರಲ್‌