Asianet Suvarna News Asianet Suvarna News

ವರಿಷ್ಠರು ಮನಸ್ಸು ಮಾಡಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾರೆ: ಡಿಕೆಶಿ ಪರ ಜಿ.ಟಿ.ದೇವೇಗೌಡ ಬ್ಯಾಟಿಂಗ್

ಸದ್ಯ ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದೆ
ಹೈಕಮಾಂಡ್ ಒಪ್ಪಿದ್ರೆ ಡಿಕೆಶಿ ಸಿಎಂ ಆಗ್ತಾರೆ
ಡಿಕೆಶಿ ಪರ ಜಿ.ಟಿ. ದೇವೇಗೌಡ ಬ್ಯಾಟಿಂಗ್

ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ, ಡಿ.ಕೆ. ಶಿವಕುಮಾರ್ (DK Shivakumar) ಸಿಎಂ ಆಗುತ್ತಾರೆ ಎಂದು ಮೈಸೂರಿನಲ್ಲಿ ಡಿ.ಕೆ. ಶಿವಕುಮಾರ್ ಪರ ಶಾಸಕ ಜಿ.ಟಿ ದೇವೇಗೌಡ (GT Devegowda) ಬ್ಯಾಟ್ ಬೀಸಿದ್ದಾರೆ. ಹಿಂದೆ ಕಾಂಗ್ರೆಸ್ ವೀಕ್ ಆಗಿತ್ತು, ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ರು. ಸದ್ಯ ಕಾಂಗ್ರೆಸ್ ಹೈಕಮಾಂಡ್ (Congress High Command) ಸ್ಟ್ಯಾಂಗ್ ಇದೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಹೇಳಿಲ್ಲ, ಅವರ ಶಾಸಕರೂ ಕೂಡ ಹೇಳಿಲ್ಲ. ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಒಂದು ಮನವಿ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮೇಲಿನ ಅಭಿಮಾನದಿಂದ ಹೇಳಿದ್ದಾರೆ. ಸಿದ್ದರಾಮಯ್ಯ (Siddaramaiah) ಸಿಎಂ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ  ಘರ್ಜನೆ ಮಾಡಲಿಲ್ವೇ. ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ರಿ ಅದರ ಆಧಾರದಲ್ಲಿ ಸಿದ್ದರಾಮಯ್ಯ ಆದ ಮೇಲೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾದ ಅಲ್ಲ. ಸಿದ್ದರಾಮಯ್ಯ, ಹೈಕಮಾಂಡ್ ಮನಸ್ಸು ಮಾಡಿದ್ರೆ ಎಷ್ಟು ವರ್ಷ ಅಂಥ ಗೊತ್ತಿಲ್ಲ ಎಂದು ಹೈಕಮಾಂಡ್ ಮನಸ್ಸು ಮಾಡಿದ್ರೆ ಡಿ.ಕೆ ಶಿವಕುಮಾರ್ ಸಿಎಂ ಆಗುತ್ತಾರೆ.

ಇದನ್ನೂ ವೀಕ್ಷಿಸಿ:  ಚನ್ನಪಟ್ಟಣ ಕ್ಷೇತ್ರ ಗೆಲ್ಲಲು ಡಿಕೆಶಿ ರಣತಂತ್ರ: ಮೂರು ದಿನಗಳ ಕಾಲ ಜನಸ್ಪಂದನ ಕಾರ್ಯಕ್ರಮ

Video Top Stories