ಕಲ್ಯಾಣ ಕರ್ನಾಟಕ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಗಾಳ: ಲಿಸ್ಟ್‌ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?

ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಇದೀಗ ಹಲವು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಸದ್ದಿಲ್ಲದೇ ಆಹ್ವಾನ ನೀಡಿದ್ದಾರೆ. ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ.23): ಕಲ್ಯಾಣ ಕರ್ನಾಟದಲ್ಲಿ ಮೆಗಾ ಅಪರೇಷನ್ ಹಸ್ತ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಕಾಂಗ್ರೆಸ್ ನಾಯಕರು ಮಾಸ್ಟರ್ ಪ್ಲ್ಯಾನ್ ರೂಪಿಸುತ್ತಿದ್ದಾರೆ. ಇದರ ಆರಂಭಿಕ ಹಂತವಾಗಿ ವಿಧಾನಪರಿಷತ್ ಬಿಜೆಪಿ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಈಗಾಗಲೇ ಕಾಂಗ್ರೆಸ್‌ಗೆ ಬಿಜೆಪಿಯ ಹಲವು ನಾಯಕರು ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮಾಜಿ ಶಾಸಕರು, ಪರಿಷತ್ ಸದಸ್ಯರು ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ಈ ಆಪರೇಷನ್ ಬೆನ್ನಲ್ಲೇ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ದೃಷ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ಶಾಸಕ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಆಪರೇಷನ್‌ಗೆ ಮುಂದಾಗಿದ್ದು, ಉಮೇಶ್ ಜಾಧವ್, ಪುತ್ರ ಅವಿನಾಶ್ ಜಾದವ್, ಮಾಲಿಕಯ್ಯ ಗುತ್ತೇದಾರ್, ಎಬಿ ಮಾಲಕರೆಡ್ಡಿ, ಸುನಿಲ್ ವಲ್ಯಾಪುರೆ ಸೇರಿದಂತೆ ಹಲವು ಬಿಜೆಪಿ ನಾಯರಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ.

Related Video