Asianet Suvarna News Asianet Suvarna News

'ಕಟೀಲ್ ಸೀರೆ ತೊಟ್ಟರೆ ಹೆಣ್ಣು ಅಲ್ಲ..ಗಂಡೂ ಅಲ್ಲ'

ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

ಶಿವಮೊಗ್ಗ, (ಅ.22): ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

ನಳಿನ್ ಕುಮಾರ್ ಕಟೀಲ್ ಮಾತಿಗೆ ಯಡಿಯೂರಪ್ಪ ಬೇಸರ

ಶಿವಮೊಗ್ಗದಲ್ಲಿ ಇಂದು (ಅ.22) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ರಾಜ್ಯಾಧ್ಯಕ್ಷರಿಂದ ನಮ್ಮ ನಾಯಕರ ಬಗ್ಗೆ ಅವಹೇಳನಕಾರಿ ಮತನಾಡುತ್ತಾರೆ. ಬಿಜೆಪಿಯಲ್ಲಿಯೇ ಕೊಳೆತು ನಾರುವಷ್ಟು ವಿಷಯಗಳಿವೆ.   ನಳಿನ್‌ ಕುಮಾರ್ ಸೀರೆ ತೊಟ್ಟರೂ ಹೆಣ್ಣು ಅಲ್ಲ ಗಂಡು ಅಲ್ಲ. ನಮ್ಮ ನಾಯಕರ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದರು.