Asianet Suvarna News Asianet Suvarna News

ಉಪಚುನಾವಣೆಯಿಂದ ಡಿಕೆಶಿ ದೂರ: ಕಾರಣವೂ ಕೊಟ್ಟ ಬೈ ಎಲೆಕ್ಷನ್ ಸ್ಪೆಷಲಿಸ್ಟ್

ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್, ಆಪದ್ಬಾಂಧವ ಎಂದೇ ಬಿಂಬಿತರಾಗಿರುವ ಕನಕಪುರದ ಶಾಸಕ ಡಿಕೆ ಶಿವಕುಮಾರ್, ಅದ್ಯಾಕೋ ಈ ಉಪಚುನಾವಣೆಯಲ್ಲಿ ಆಸಕ್ತಿ ತೋರಿಸುತ್ತಿಲ್ಲ. ಪ್ರತಿ ಬೈ ಎಲೆಕ್ಷನ್ ನಲ್ಲೂ ಫುಲ್ ಆ್ಯಕ್ಟಿವ್ ಆಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಅಭ್ಯರ್ಥಿ ಗೆಲ್ಲಿಸುವಲ್ಲಿ ಯಶಸ್ವಿಯಾಗುತ್ತಿದ್ದ ಡಿಕೆಶಿ ಈ ಬಾರಿ ಬೈ ಎಲೆಕ್ಷನ್ ನಿಂದ ದೂರ ಉಳಿಯುವ ಮಾತುಗಳನ್ನಾಡಿದ್ದಾರೆ.

ಬೆಂಗಳೂರು, [ನ.15]: ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆಯಾಗಿದೆ. ಇನ್ನೇನಿದ್ದರೂ ಅಭ್ಯರ್ಥಿಗಳ ಗೆಲುವಿಗೆ ಕಾರ್ಯತಂತ್ರ ರೂಪಿಸುವುದು ಬಾಕಿ ಉಳಿದಿದೆ.

 ಆದ್ರೆ, ಇದರ ಮಧ್ಯೆ ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್, ಆಪದ್ಬಾಂಧವ ಎಂದೇ ಬಿಂಬಿತರಾಗಿರುವ ಕನಕಪುರದ ಶಾಸಕ ಡಿಕೆ ಶಿವಕುಮಾರ್, ಅದ್ಯಾಕೋ ಈ ಉಪಚುನಾವಣೆಯಲ್ಲಿ ಆಸಕ್ತಿ ತೋರಿಸುತ್ತಿಲ್ಲ. ಪ್ರತಿ ಬೈ ಎಲೆಕ್ಷನ್ ನಲ್ಲೂ ಫುಲ್ ಆ್ಯಕ್ಟಿವ್ ಆಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಅಭ್ಯರ್ಥಿ ಗೆಲ್ಲಿಸುವಲ್ಲಿ ಯಶಸ್ವಿಯಾಗುತ್ತಿದ್ದ ಡಿಕೆಶಿ ಈ ಬಾರಿ ಬೈ ಎಲೆಕ್ಷನ್ ನಿಂದ ದೂರ ಉಳಿಯುವ ಮಾತುಗಳನ್ನಾಡಿದ್ದಾರೆ.

ಇಡಿ ಕೇಸ್ ಕಾರಣವನ್ನು ನೀಡಿ ಉಪಚುನಾವಣೆ ಕಣದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಎಲ್ಲವನ್ನೂ ವಿರೋಧ ಪಕ್ಷದ ನಾಯಕ ನೋಡಿಕೊಳ್ಳುತ್ತಾರೆ ಎಂದು ಸಿದ್ದರಾಮಯ್ಯನವರ ಮೇಲೆ ಹಾಕಿ ಕೈ ತೊಳೆದುಕೊಂಡಿದ್ದಾರೆ. ಹಾಗಾದ್ರೆ ಡಿಕೆಶಿ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

Video Top Stories