ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌'

ಗುತ್ತಿಗೆದಾರರು 40% ಕಮಿಷತ್ ಆರೋಪ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಾಳಗಂಡಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ  ಅವರು  ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.  ಇನ್ನು ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

Share this Video
  • FB
  • Linkdin
  • Whatsapp

ಬಾಗಲಕೋಟೆ, (ಏ.18): ಕೇವಲ ಗುತ್ತಿಗೆದಾರರಿಂದ ಮಾತ್ರವಲ್ಲ, ಮಠಾಧೀಶರಿಂದಲೂ ಪರ್ಸೆಂಟೇಜ್ ಕೇಳುತ್ತಿದೆ ಎಂದು ಕರ್ನಾಟಕ ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಕೇಳಿಬಂದಿದೆ.

ದಿಂಗಾಲೇಶ್ವರ ಸ್ವಾಮೀಜಿ ಊಸರವಳ್ಳಿ ತರ ಬಣ್ಣ ಬದಲಾಯಿಸಿ ಮಾತಾಡ್ತಾರೆ ಎಂದ ಸಚಿವ

ಹೌದು...ಗುತ್ತಿಗೆದಾರರು 40% ಕಮಿಷತ್ ಆರೋಪ ಮಾಡಿದ್ದರು. ಇದೀಗ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಾಳಗಂಡಿಯಲ್ಲಿ ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ಮಠಗಳು ಶೇ 30ರ ಪರ್ಸೆಂಟೇಜ್ ಕೊಟ್ಟರೆ ಮಾತ್ರ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಪ್ರತಿಕ್ರಿಯಿಸಿದ್ದು, ಉಳಿದವರಿಗೆಲ್ಲಾ 40% ಕಮಿಷನ್, ಕಾವಿಗಳಿಗೆ 30% ಕಮಿಷನ್, 10% ಡಿಸ್ಕೌಂಟ್‌ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ.

Related Video