Asianet Suvarna News Asianet Suvarna News

ಸಿಎಂ ಬದಲಾವಣೆ ಚರ್ಚೆ: ಬಿಎಸ್‌ವೈ ಬದಲಾಗೋದು ಗೊತ್ತಿತ್ತು...ಬೊಮ್ಮಾಯಿ ಬಗ್ಗೆ ಸಿದ್ದು ಹೇಳಿದ್ದಿಷ್ಟು.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಿಎಂ ಬದಲಾವಣೆ ಸದ್ದು ಮಾಡುತ್ತಿದೆ. ಇನ್ನು ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು ಹೀಗೆ.

Aug 10, 2022, 4:42 PM IST

ಹುಬ್ಬಳ್ಳಿ, (ಆಗಸ್ಟ್.10): ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮತ್ತೆ ಸಿಎಂ ಬದಲಾವಣೆ ಸದ್ದು ಮಾಡುತ್ತಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.

ಸಿಎಂ ಬದಲಾವಣೆ ಚರ್ಚೆ: ಊಹಾಪೋಹಳಿಗೆ ಸ್ಪಷ್ಟನೆ ಕೊಟ್ಟ ಕಟೀಲ್

ಇನ್ನು ಈ ಬಗ್ಗೆ ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು,  ಕಳೆದ ವರ್ಷ ಬಿಜೆಪಿಯಲ್ಲಿ ಸಿಎಂ ಸ್ಥಾನದಿಂದ ಯಡಿಯೂರಪ್ಪ ಬದಲಾವಣೆ ಬಗ್ಗೆ ನನಗೆ ಗೊತ್ತಿತ್ತು. ಅದಕ್ಕೆ ನಾನು ಈ ಹಿಂದೆ ಹೇಳಿದ್ದೆ. ಆದರೆ ಬೊಮ್ಮಾಯಿ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ಟ್ವೀಟ್ ಮಾಡಿದವರನ್ನೇ ಕೇಳಿ ಎಂದು ಸ್ವಪಕ್ಷದ ಟ್ವೀಟ್‌ಗೆ ಟಾಂಗ್ ಕೊಟ್ಟಿದ್ದಾರೆ.