Asianet Suvarna News Asianet Suvarna News

ವಿಡಿಯೋ ಪ್ರಸಾರಕ್ಕೆ ತಡೆಯಾಜ್ಞೆ ತಂದ ಸದಾನಂದಗೌಡ, ಕಳ್ಳನ ಮನಸ್ಸು ಹುಳ್ಳುಳ್ಳುಗೆ ಎಂದ ಸಿದ್ದು

Jul 3, 2021, 5:39 PM IST

ಬೆಂಗಳೂರು, (ಜುಲೈ.03): ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. 

ಕೇಂದ್ರ ಸಚಿವಗೂ ಸಿಡಿ ಭೀತಿ: ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ತಂದ ಸದಾನಂದಗೌಡ

ಇನ್ನು ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದು, ಕಳ್ಳನ ಮನಸ್ಸು ಹುಳ್ಳುಳ್ಳುಗೆ..ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕೊಂಡ್ರಂತೆ ಎಂದು ಲೇವಡಿ ಮಾಡಿದ್ದಾರೆ.