ಭಾರತ್ ಬಂದ್: ಮೋದಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ...!
ರಾಜ್ಯದಲ್ಲಿ ಕಲಾಪ ಆರಂಭಕ್ಕೂ ಮುನ್ನ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು, (ಡಿ.08): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೆಲ ಮಸೂದೆಗಳನ್ನ ವಿರೋಧಿಸಿ ರೈತ ಸಂಘಟನೆಗಳು ಇಂದು (ಮಂಳವಾರ) ಭಾರತ್ ಬಂದ್‌ಗೆ ಕರೆ ಕೊಟ್ಟಿವೆ.
ಇನ್ನು ಇದಕ್ಕೆ ಕಾಂಗ್ರೆಸ್ ಸಹ ಸಾಥ್ ಕೊಟ್ಟಿದೆ. ಅದರಲ್ಲೂ ರಾಜ್ಯದಲ್ಲಿ ಕಲಾಪ ಆರಂಭಕ್ಕೂ ಮುನ್ನ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.