
'ನೀವೇನ್ ಕತ್ತೆ ಕಾಯ್ತಿದ್ದೀರಾ.? ಕಡ್ಲೆಪುರಿ ತಿನ್ನುತ್ತಾಇದ್ದೀರಾ? ಕೋಲಾಟ ಆಡ್ತಾ ಇದ್ದೀರಾ?'
ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು, (ಏ.25): ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ನೀಡಿರುವ ನೋಟಿಸ್ ಬಗ್ಗೆ ಸಿಡಿಮಿಡಿಗೊಂಡಿರುವ ಸಿಐಡಿ ಪೊಲೀಸರು ನೋಟಿಸ್ ನೀಡಿ ಇಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ನೋಟಿಸ್ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಶಾಸಕ ಪ್ರಿಯಾಂಕ್ ಖರ್ಗೆ ಗೃಹ ಸಚಿವರ ವಿರುದ್ಧ ಹಾಗೂ ಸಿಐಡಿ ವಿರುದ್ಧ ಕಿಡಿಕಾರಿದ್ದಾರೆ.
PSI Recruitment Scam ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್
ನೀವೇನು ಕತ್ತೆ ಕಾಯ್ತಿದ್ದೀರಾ? ಕಡ್ಲೆಪುರಿ ತಿನ್ನುತ್ತಿದ್ದೀರಾ? ಆರೋಪಿ ಮೇಲೆ ಯಾಕೆ ಎಫ್‌ಐಆರ್ ಮಾಡಿಲ್ಲ. ಇಡೀ ಇಲಾಖೆ ಇದರಲ್ಲಿ ಶಾಮೀಲಾಗಿದೆ ಎಂದು ತಿಳಿಯಬಹುದಾ? ಈ ಪಕರಣದಲ್ಲಿ ಶಾಮೀಲಾಗಿರುವರು ಯಾರು? ಯಾಕೆ ಅವರನ್ನು ವಿಚಾರಣೆ ನಡೆಸಿಲ್ಲ. ನೇಮಕಾತಿ ಮುಖ್ಯಸ್ಥರೇ ಗೃಹ ಸಚಿವರು. ಇಲ್ಲಿಯವರೆಗೆ ಅವರನ್ನು ಯಾಕೆ ವಿಚಾರಣೆಗೆ ಕರೆದಿಲ್ಲ ಎಂದು ಪ್ರಶ್ನಿಸಿದರು.