'PSI Scam ನಾನು ಮಾತನಾಡಿದ್ದಕ್ಕೆ ಬೆಳಕಿಗೆ ಬಂತು, ಸುಮ್ನೇ ಇದ್ದಿದ್ರೆ ಮುಚ್ಚಿ ಹಾಕ್ತಿದ್ರು'
545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನ ಸಿಐಡಿ ಬಂಧಿಸಿದೆ. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೆ ಭಾರೀ ಸದ್ದು ಮಾಡುತ್ತಿದೆ.
ಹುಬ್ಬಳ್ಳಿ, (ಜುಲೈ.05):545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನ ಸಿಐಡಿ ಬಂಧಿಸಿದೆ. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೆ ಭಾರೀ ಸದ್ದು ಮಾಡುತ್ತಿದೆ.ಹೊಸ ತಿರುವುಪಡೆದುಕೊಳ್ಳುತ್ತಿದೆ.
ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಶಾಮೀಲು?
ಇನ್ನು ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್, ಬಿಜೆಪಿ ವಿರುದ್ಧ ಮುಗಿಬಿದ್ದಿದೆ. ಅಮೃತ್ ಪೌಲ್ ಬಂಧನದ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಫೋಟಕ ಆರೋಪಗಳನ್ನ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕೂಡ ಪ್ರಮುಖ ಆರೋಪಗಳನ್ನ ಮಾಡಿದ್ದಾರೆ.