ಲೋಕ ಸಮರಕ್ಕೆ ಕಾಂಗ್ರೆಸ್ ಸಜ್ಜು: ಸಮಿತಿಗಳ ಮೂಲಕ 28 ಲೋಕಸಭಾ ಕ್ಷೇತ್ರಗಳ ಸರ್ವೆ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿಯನ್ನು ಆರಂಭಿಸಿದ್ದು, ಸಮಿತಿಗಳನ್ನು ರಚಿಸುವ ಬಗ್ಗೆ ಚಿಂತನೆ ನಡೆಸಿದೆ.
ವಿಧಾನಸಭಾ ಚುನಾವಣೆ ಮಾದರಿಯಲ್ಲೇ ಲೋಕಸಭಾ ಚುನಾವಣೆ(Lok Sabha election) ನಡೆಸಲು ಕಾಂಗ್ರೆಸ್ (Congress) ಚಿಂತನೆ ನಡೆಸಿದೆ. ಈ ಹಿನ್ನೆಲೆ ಪ್ರಜಾಧ್ವನಿ ರೀತಿ 28 ಲೋಕಸಭಾ ಕ್ಷೇತ್ರಗಳಲ್ಲಿ ಸಂಚಾರ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಅಲ್ಲದೇ ಉತ್ತರ ಮತ್ತು ದಕ್ಷಿಣ ಕರ್ನಾಟಕಕ್ಕೆ ಒಂದೊಂದು ಸಮಿತಿ ರಚಿಸಲಿದೆ. ಈ ಸಮಿತಿಯಲ್ಲಿ(Committee) ಸಚಿವರು, ಶಾಸಕರು, ರಾಜ್ಯ, ಜಿಲ್ಲಾ ಪ್ರಮುಖರಿಗೆ ಸ್ಥಾನ ನೀಡಲಾಗುವುದು. ಈ ಹಿಂದೆ ಪ್ರಜಾಧ್ವನಿ(Prajadhwani) ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಮಿತಿಗಳನ್ನು ಮಾಡಿತ್ತು. ಅದೇ ರೀತಿ ಈ ಬಾರಿಯೂ ಸಹ ಸಮಿತಿಗಳನ್ನು ರಚಿಸಲಿದೆ. ಈ ಮೂಲಕ ಶತಾಯಗತಾಯ ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ನಿರ್ಧರಿಸಿದೆ. ಈ ಸಮಿತಿಗಳು ಕ್ಷೇತ್ರದಲ್ಲಿ ಪಕ್ಷದ ಬಗ್ಗೆ ಯಾವ ಅಭಿಪ್ರಾಯವಿದೆ ಎಂಬುದನ್ನು ತಿಳಿದುಕೊಳ್ಳುವುದಾಗಿದೆ.
ಇದನ್ನೂ ವೀಕ್ಷಿಸಿ: ಟೊಮ್ಯಾಟೋಗೆ ಬಂಗಾರದ ಬೆಲೆ: ಬಂಪರ್ ರೇಟ್‌ನಿಂದ ರೈತರಿಗೆ ಟೆನ್ಷನ್..!