ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಮಾ.22): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಬ್ಬ ಶಾಸಕಾಂಗ ಪಕ್ಷದ ನಾಯಕರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುತ್ತಾರೆ. ಆದರೆ, ಒಂದು ರಾಷ್ಟ್ರೀಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೇ ತಮಗೆ ಕ್ಷೇತ್ರ ಹುಡುಕಾಟದ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇನ್ನು ಮುಂದಿನ ಸಿಎಂ ಅಭ್ಯರ್ಥಿಗೇ ಒಂದು ಕ್ಷೇತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ. ನಾಡಿನ ಜನತೆ ಅಥವಾ ಬೇರೆಯವರು ಚರ್ಚೆ ಮಾಡುವ ಬದಲೇ, ಸ್ವತಃ ಅವರೇ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇದರಿಂದ ಅವರಲ್ಲಿ ಹೊಂದಾಣಿಕೆ ಕೊರತೆ ಇದೆ ಎಂಬುದು ಸ್ಪಷ್ಟವಾಗಲಿದೆ. ಆದ್ದರಿಂದ ಎಚ್ಚರಿಕೆಯಿಂದ ನಡೆ ಇಡಬೇಕು ಎಂದು ಗೊಂದಲಕ್ಕೆ ಬಿದ್ದಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

Related Video