
ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್ ಮಣೆ..?
ಹೆಚ್ಚು ಟಿಕೆಟ್ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆ ನಡೆಸಿದ್ದಾರೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಈ ಬಾರಿ ಲಿಂಗಾಯತರಿಗೆ ಮಣೆ ಹಾಕಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 70 ಟಿಕೆಟ್‌ಗೆ ಲಿಂಗಾಯತರು ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚು ಟಿಕೆಟ್ ಕೊಟ್ಟರೆ ಹೆಚ್ಚು ಸ್ಥಾನ ಗೆಲ್ತೀವಿ ಎಂದು ಮನವರಿಕೆ ಮಾಡುತ್ತಿದ್ದಾರೆ. ಈ ಸಂಬಂಧ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಬಸವ ಸಮಿತಿಯಲ್ಲಿ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಸಭೆಯನ್ನೂ ನಡೆಸಿದ್ದಾರೆ. ದಕ್ಷಿಣ ಕರ್ನಾಟಕದಲ್ಲೂ ಸಹ ಹೆಚ್ಚು ಲಿಂಗಾಯತರಿಗೆ ಟಿಕೆಟ್ ನೀಡಿ ಎಂದು ಕೇಳಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ