Suvarna Focus: ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೈ ಪ್ರಯೋಗಿಸಿದ್ದು ದೋಸ್ತಿ ಅಸ್ತ್ರ..

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸೀಟುಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಕರ್ನಾಟಕ ಚುನಾವಣಾ ಕುರುಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ  ಕಾಂಗ್ರೆಸ್‌ನ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಕಾರಣಕರ್ತರು.

First Published May 14, 2023, 12:11 PM IST | Last Updated May 14, 2023, 12:11 PM IST

ಬೆಂಗಳೂರು (ಮೇ.14): ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 136 ಸೀಟುಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಕರ್ನಾಟಕ ಚುನಾವಣಾ ಕುರುಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವಿನ ಹಿಂದೆ  ಕಾಂಗ್ರೆಸ್‌ನ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಕಾರಣಕರ್ತರು. ಹೌದು! ಕರ್ನಾಟಕದಲ್ಲಿ ಹೊಸ ಸರ್ಕಾರ ಆಸ್ತಿತ್ವಕ್ಕೆ ಬಂದಿದೆ. ಕಾಂಗ್ರೆಸ್ ತನ್ನ ಅಧಿಕಾರ ಸ್ಥಾಪನೆ ಮಾಡಿ ರಾಜ್ಯವನ್ನ ಮುನ್ನಡೆಸಲಿದೆ. ಇನ್ನು ಈ ಸಾಧನೆಯ ಹಿಂದೆ ಮೂರು ವರ್ಷಗಳಿಂದ ನಡೆಸಿದ ಅವಿರತ ಸಂಘಟಿತ ಪ್ರಯತ್ನ, ನೀಡಿದ ಗ್ಯಾರಂಟಿಗಳು, ತರ್ಕಬದ್ಧ ಪ್ರಣಾಳಿಕೆ, ಅಹಿಂದ ಜತೆಗೆ ಒಕ್ಕಲಿಗ, ಲಿಂಗಾಯತ, ಮುಸ್ಲಿಂ ಮತಗಳ ಕ್ರೋಢೀಕರಣ ಮತ್ತು ಬಿಜೆಪಿ ಆಡಳಿತ ವಿರೋಧಿ ಅಲೆಯು ಪ್ರಮುಖವಾಗಿ ಕೆಲಸ ಮಾಡಿದೆ. ರಾಜ್ಯ ಬಿಜೆಪಿ ಸರ್ಕಾರದ ಆಡಳಿತದ ಲೋಪದೋಷಗಳನ್ನು ಅತ್ಯಂತ ಸಮರ್ಥವಾಗಿ ಜನರ ಮುಂದೆ ತೆರೆದಿಡುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ರೂಪಿಸಲು ಕಾಂಗ್ರೆಸ್‌ ನಾಯಕತ್ವ ಅವಿರತ ಪ್ರಯತ್ನ ನಡೆಸಿತ್ತು. ಗುತ್ತಿಗೆದಾರರ ಸಂಘ ನೀಡಿದ ದೂರನ್ನು ಆಧರಿಸಿ 40 ಪರ್ಸೆಂಟ್‌ ಸರ್ಕಾರ ಎಂಬ ಹಣೆಪಟ್ಟಿಯನ್ನು ಬಿಜೆಪಿ ಸರ್ಕಾರಕ್ಕೆ ಕಟ್ಟುವಲ್ಲಿ ಹಾಗೂ ಅದನ್ನು ಜನಮಾನಸಕ್ಕೆ ಮುಟ್ಟಿಸುವಲ್ಲಿ ಕಾಂಗ್ರೆಸ್‌ ಚುನಾವಣಾ ತಂತ್ರಜ್ಞ ಪಡೆ ಅತ್ಯಂತ ಯಶಸ್ವಿಯಾಗಿ ಕೆಲಸ ಮಾಡಿತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.